ಬೆಂಗಳೂರು : ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಪ್ರಕ್ರಿಯೆಯಲ್ಲಿ ಅನುಸರಿಸುವ ಕ್ರಮಗಳ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ(2)ರಲ್ಲಿ ರಾಜ್ಯ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ: 01-01-2016 ರಿಂದ 31-12-2020 ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಉಲ್ಲೇಖ(2)ರ ಸರ್ಕಾರದ ಆದೇಶದಲ್ಲಿ ಅನುಮತಿ ನೀಡಲಾಗಿದೆ. ಸದರಿ ಆದೇಶದಲ್ಲಿ ಅನುದಾನಿತ ಪ್ರೌಢಶಾಲೆಗಳ ಖಾಲಿ ಹುದ್ದೆ ಭರ್ತಿ ಪ್ರಕ್ರಿಯೆಯನ್ನು ಆನ್ಲೈನ್ ತಂತ್ರಾಂಶದ ಮೂಲಕ ನಿರ್ವಹಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಪ್ರಸ್ತಾವನೆಗಳನ್ನು ವ್ಯವಹರಿಸಲು ನಿರ್ದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳ ನೇಮಕಾತಿ ಪ್ರಕ್ರಿಯೆಯನ್ನು ಆನ್ ಲೈನ್ ಮುಖಾಂತರ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ.
ಸದರಿ ಪ್ರಕ್ರಿಯೆಗೆ ಪೂರಕವಾಗಿ ಉಲ್ಲೇಖ3) ರ ಈ ಕಚೇರಿ ಸುತ್ತೋಲೆಯಂತೆ ಈಗಾಗಲೇ ಇ.ಐ, ಡಿ.ಎಸ್ ನಲ್ಲಿ ಖಾಸಗಿ ಅನುದಾನಿತ ಶಾಲೆಗಳ ಎಲ್ಲಾ ಬೋಧಕ ಮತ್ತು ಬೋಧಕೇತರ ನೌಕರರ ಮಾಹಿತಿಯನ್ನು ಇಂದೀಕರಿಸಲು ಸೂಚಿಸಲಾಗಿದ್ದು ಪ್ರಕ್ರಿಯೆ ಪೂರ್ಣಗೊಂಡಿರುತ್ತದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲಾ ಅನುದಾನಿತ ಶಾಲೆಗಳ ಮಾಹಿತಿಯನ್ನು ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ಇಂದೀಕರಿಸಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು,
ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಯನ್ನು ತಂತ್ರಾಂಶದ ಮೂಲಕ ವ್ಯವಹರಿಸಲು ಮೊದಲನೆ ಹಂತದಲ್ಲಿ ಖಾಸಗಿ ಅನುದಾನಿತ ಪ್ರೌಢಶಾಲೆಗಳ ಮಂಜೂರಾದ, ಕಾರ್ಯನಿರ್ವಹಿಸುತ್ತಿರುವ ಖಾಲಿ ಹುದ್ದೆಗಳ ಮಾಹಿತಿಯನ್ನು ಅಪ್ಡೇಟ್ ಮಾಡುವ ಕಾರ್ಯವನ್ನು ಡಿ ಡಿ ಓ ಗಳಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿರ್ವಹಿಸಬೇಕಿರುತ್ತದೆ. ಸದರಿ ಕಾರ್ಯವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ಎಸ್.ಎ.ಟಿ.ಎಸ್ ಲಾಗಿನ್ನಲ್ಲಿ ನಿರ್ವಹಿಸಲು ಕೆಳಕಂಡ ಕ್ರಮಗಳನ್ನು ಅನುಸರಿಸುವುದು.
1. ತಮ್ಮ ವ್ಯಾಪ್ತಿಯ ಎಲ್ಲಾ ಖಾಸಗಿ ಅನುದಾನಿತ ಪ್ರೌಢಶಾಲೆಗಳ ಮಾಹಿತಿ ಮತ್ತು ಸಂಬಂಧಿಸಿದ ದಾಖಲೆಗಳನ್ನು (ಶಾಲಾ ಅನುದಾನಕ್ಕೆ ಒಳಪಟ್ಟ ಆದೇಶ, ಅನುದಾನ ಸಹಿತವಾಗಿ ಅನುಮೋದನೆಗೊಂಡ ಶಿಕ್ಷಕರ ಆದೇಶದ ಪ್ರತಿ, ಶಾಲಾ ಮಾನ್ಯತೆ ನವೀಕರಣ, ಸ್ಮಾಟ್ಸ್ ಇತ್ಯಾದಿ) ಸಂಗ್ರಹಿಸುವುದು.
2. ತಂತ್ರಾಂಶದಲ್ಲಿ ಲಾಗಿನ್ ಆದ ನಂತರ ತಮ್ಮ ವ್ಯಾಪ್ತಿಯ ಎಲ್ಲಾ ಖಾಸಗಿ ಅನುದಾನಿತ ಪ್ರೌಢಶಾಲೆಗಳ ಮಾಹಿತಿಯು ಲಭ್ಯವಾಗುವುದು. ಯಾವುದೇ ಶಾಲೆಯ ಮಾಹಿತಿ ಇಲ್ಲದಿರುವುದು ಕಂಡುಬಂದಲ್ಲಿ ಎಸ್.ಎ.ಟಿ.ಎಸ್ ತಂತ್ರಾಂಶದಲ್ಲಿ ಸದರಿ ಶಾಲೆಯ ಮಾಹಿತಿಯನ್ನು ಪರಿಶೀಲಿಸಿ ಇಂದೀಕರಿಸುವುದು.
3. ತಮ್ಮ ವ್ಯಾಪ್ತಿಯ ಎಲ್ಲಾ ಶಾಲೆಗಳ ಮಾಹಿತಿ ಲಭ್ಯವಿರುವುದನ್ನು ಖಚಿತಪಡಿಸಿಕೊಂಡ ನಂತರ ಶಾಲಾವಾರು ಮಾಹಿತಿ ಇಂದೀಕರಣ ಪ್ರಕ್ರಿಯೆಯನ್ನು ಪ್ರಾರಂಭಿಸುವುದು




