ಅಮೆರಿಕದಲ್ಲಿ ನಿಲ್ಲಿಸಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಭಾರಿ ಅವಘಡವೊಂದು ತಪ್ಪಿದೆ.
ಡೆನ್ವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕನ್ ಏರ್ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ. ಗೇಟ್ ಸಿ 38 ರಲ್ಲಿ ನಿಲ್ಲಿಸಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಪ್ಪು ಹೊಗೆ ಗಾಳಿಯಲ್ಲಿ ಹರಡಿತು. ಕೂಡಲೇ ಪ್ರಯಾಣಿಕರನ್ನು ಸ್ಥಳಾಂತರಿಸಲಾಯಿತು ಮತ್ತು ಸ್ಲೈಡ್ಗಳನ್ನು ನಿಯೋಜಿಸಲಾಗಿದೆ” ಎಂದು ವಿಮಾನ ನಿಲ್ದಾಣ ತಿಳಿಸಿದೆ.
ವಿಮಾನ ನಿಲ್ದಾಣದ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಕೆಲಸ ಮಾಡುತ್ತಿರುವಾಗ ವಿಮಾನದಲ್ಲಿ ಜ್ವಾಲೆಗಳು ಮತ್ತು ಹೊಗೆ ಆವರಿಸಿರುವ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.
American Airlines flight 4012 just caught fire at Denver airport pic.twitter.com/EHIGMAqJjJ
— Stone (@flynnstone) March 14, 2025