![](https://kannadadunia.com/wp-content/uploads/2023/08/krishna-byre-gowda.png)
ವಿಜಯನಗರ : ರಾಜ್ಯ ಸರ್ಕಾರದಿಂದಲೇ ಬರ ಪರಿಹಾರವನ್ನು ಪಾವತಿಸುವ ಕುರಿತಂತೆ ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಬರ ಪರಿಹಾರದ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಈವರೆಗೆ ಯಾವುದೇ ಉತ್ತರ ಬಂದಿಲ್ಲ. ಇದರಿಂದ ಜನರು ತೊಂದರೆಯಲ್ಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದಿಂದ ಮೊದಲ ಕಂತಿನ ಹಣ ಪಾವತಿಸಲು ಮುಂದಾಗಿದ್ದಾರೆ ಎಂದು ಹೇಳಿದ್ದಾರೆ.
ಬರ ಪರಿಹಾರ ಮೊದಲ ಕಂತಿನ ಹಣ ಪಾವತಿಸಲು ಪೂರ್ವ ಸಿದ್ಧತೆ ಮಾಡಲಾಗುತ್ತಿದ್ದು, ರೈತರ ಮಾಹಿತಿಯನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಅಪ್ಡೇಟ್ ಮಾಡಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.