ಬೆಂಗಳೂರು : ಬೆಂಗಳೂರಿನಲ್ಲಿ ಫೆ.10 ರಿಂದ ಫೆ.10 ರಿಂದ ಬೆಂಗಳೂರಿನಲ್ಲಿ ಏರ್ ಶೋ ಆರಂಭವಾಗಲಿದ್ದು ನಡೆಯಲಿದ್ದು, ಬೆಂಗಳೂರಿನ 21 ಕೆರೆಗಳಲ್ಲಿ ಮೀನುಗಾರಿಕೆ ನಿಷೇಧ ಮಾಡಲಾಗಿದೆ.
ಮೀನುಗಾರಿಕೆ ಇಲಾಖೆ ಕಳೆದ ಜ.23 ರಿಂದ ಫೆ.17ರ ವರೆಗೆ, ಬೆಂಗಳೂರು ಉತ್ತರ, ಯಲಹಂಕ ಸುತ್ತಮುತ್ತಲಿನ 21 ಕರೆಗಳಲ್ಲಿ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಇಲಾಖೆ ನಿರ್ದೇಶಕ ದಿನೇಶ್ ಕುಮಾರ್ ತಿಳಿಸಿದ್ದಾರೆ. ಮೀನುಗಳು ಹೊರಗಡೆ ಬಂದರೆ ಪಕ್ಷಿಗಳ ಹಾರಾಟ ಹೆಚ್ಚಾಗಲಿದೆ. ಇದರಿಂದ ವಿಮಾನ ಹಾರಾಟಕ್ಕೆ ತೊಂದರೆಯಾಗಲಿದೆ. ಆದ್ದರಿಂದ ಮೀನುಗಾರಿಕೆ ನಿಷೇಧ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಏರ್ ಶೋ 2025 ಫೆಬ್ರವರಿ 10ರಿಂದ ಫೆಬ್ರವರಿ 14ರ ವರೆಗೆ ಪ್ರತಿದಿನವೂ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ನಡೆಯಲಿದೆ. ಏರ್ ಶೋದಲ್ಲಿ ಬೆಳಿಗ್ಗೆಯಿಂದ ಸಂಜೆಯ ವರೆಗೆ ಸುತ್ತಾಡುವುದಕ್ಕೆ ಅವಕಾಶ ಇರಲಿದೆ. ಫೆಬ್ರವರಿ 13 ಹಾಗೂ 14ರಂದು ಸಾರ್ವಜನಿಕರಿಗೆ ಅವಕಾಶ ಇರಲಿದೆ.