ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ಹಾಕಲಾದ ಪೋಸ್ಟರ್, ಬ್ಯಾನರ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗ ಮಹತ್ವದ ಸುತ್ತೋಲೆ ಹೊರಡಿಸಿದೆ.
ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಘೋಷಣೆಯಾದ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೊಳ್ಳುವುದರಿಂದ ಸರ್ಕಾರಿ, ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಇರುವಂತಹ ಅನಧಿಕೃತ Wall writings, posters, banners ಇತ್ಯಾದಿಗಳನ್ನು ಕ್ರಮವಾಗಿ ಚುನಾವಣೆ ಘೋಷಣೆಯಾದ 24 ಗಂಟೆಗಳು, 48 ಗಂಟೆಗಳು ಮತ್ತು 72 ಗಂಟೆಗಳೊಳಗಾಗಿ ಉಲ್ಲೇಖ (1) ಮತ್ತು (2) ರ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ತೆರವುಗೊಳಿಸಬೇಕಾಗಿರುತ್ತದೆ.
ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ತಯಾರಿಸಲು ತಮ್ಮ ಹಂತದಲ್ಲಿ ತಂಡಗಳನ್ನು ಮುಂಗಡವಾಗಿ ರಚಿಸಿಕೊಂಡು, ಚುನಾವಣೆ ಘೋಷಣೆಯಾದ ತಕ್ಷಣ ಮಾಹಿತಿಯನ್ನು ಇದರೊಂದಿಗೆ ಲಗತ್ತಿಸಿರುವ ಪ್ರಪತ್ರದಲ್ಲಿ ಈ ಕಚೇರಿಯ ಇ ಮೇಲ್ ವಿಳಾಸ additionalceol.karnataka@gmail.com jointecomcc@gmail.com ಕ್ಕೆ ಸಲ್ಲಿಸುವಂತೆ ಹಾಗೂ ಅದರ ಪ್ರತಿಯನ್ನು ಈ ಕಛೇರಿಗೆ ಸಲ್ಲಿಸುವಂತೆ ಉಪ ಮುಖ್ಯ ಚುನಾವಣಾಧಿಕಾರಿಗಳು ರಾಜ್ಯದ ಎಲ್ಲಾ ಜಿಲ್ಲೆಯ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.