alex Certify BIG NEWS : ರಾಜ್ಯದಲ್ಲೇ ಮೊದಲ ಬಾರಿ : ಫೆ. 1 , 2 ರಂದು ಸರ್ಕಾರದಿಂದ ‘ಅರಣ್ಯ ಪಕ್ಷಿಗಣತಿ’.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದಲ್ಲೇ ಮೊದಲ ಬಾರಿ : ಫೆ. 1 , 2 ರಂದು ಸರ್ಕಾರದಿಂದ ‘ಅರಣ್ಯ ಪಕ್ಷಿಗಣತಿ’.!

ಬೆಂಗಳೂರು : ರಾಜ್ಯದಲ್ಲೇ ಮೊದಲ ಬಾರಿಗೆ ಫೆ. 1 , 2 ರಂದು ಸರ್ಕಾರದಿಂದ ‘ಅರಣ್ಯ ಪಕ್ಷಿಗಣತಿ’ ನಡೆಯಲಿದೆ.

ಹೌದು. ರಾಜ್ಯದಲ್ಲೇ ಮೊದಲ ಬಾರಿಗೆ ಪಕ್ಷಿಗಳ ಸಮೀಕ್ಷೆ ನಡೆಸಲು ಅರಣ್ಯ ಇಲಾಖೆ ನಿರ್ಧರಿಸಿದ್ದು, ಫೆಬ್ರವರಿ 1 ಮತ್ತು 2 ರಂದು ಮಲೆ ಮಹದೇಶ್ವರ ಬೆಟ್ಟ ವನ್ಯ ಜೀವಿಧಾಮದಲ್ಲಿ ಸಮೀಕ್ಷೆ ನಡೆಯಲಿದೆ.

2 ದಿನ ನಡೆಯುವ ಸಮೀಕ್ಷೆಗಾಗಿ 50 ತಂಡಗಳನ್ನು ರಚಿಸಲಾಗುತ್ತಿದೆ. ಈ ತಂಡಗಳು 2 ದಿನವೂ ಬೆಳಗಿನ ಜಾವ 3 ರಿಂದ 4 ಗಂಟೆಯವರೆಗೆ ಹಾಗೂ ಸಂಜೆ ವೇಳೆ ಕಾಡಿನಲ್ಲಿ ಸಂಚರಿಸಿ ಪಕ್ಷಿಗಳ ಇರುವಿಕೆಯನ್ನು ದಾಖಲಿಸಲಿವೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...