ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕೊರೊನಾ ಸೋಂಕಿಗೆ ರಾಜ್ಯದಲ್ಲಿ ನಾಲ್ಕನೇ ಬಲಿಯಾಗಿದೆ.
ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರದಿಯಾದ ಸಾವಿನಿಂದಾಗಿ ಕಳೆದ ಒಂದು ವಾರದಲ್ಲೇ ನಾಲ್ಕು ಮಂದಿ ಕೊರೊನಾ ಸೋಂಕಿಗೆ ಬಲಿಯಾದಂತಾಗಿದೆ.
ರಾಜ್ಯದಲ್ಲಿ ಶುಕ್ರವಾರ ಹೊಸದಾಗಿ 78 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ ಇಂದು 68 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 175ಕ್ಕೆ ಏರಿಕೆಯಾಗಿದೆ. ಮಂಗಳೂರಿನಲ್ಲಿ ಇಂದು ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 3.29 ರಷ್ಟು ಇದೆ. ಆಸ್ಪತ್ರೆಯಲ್ಲಿ 13 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 162 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ.