ನವದೆಹಲಿ : ಜಾರ್ಖಂಡ್ ನ ಲೋಹರ್ದಗಾದಲ್ಲಿ ಇಬ್ಬರು ಬಾಲಕಿಯರ ಸಾಮೂಹಿಕ ಅತ್ಯಾಚಾರ ನಡೆದಿದ್ದು, 11 ಮಂದಿಯನ್ನು ಬಂಧಿಸಿದ್ದಾರೆ.
ಮೂವರು ಅಪ್ರಾಪ್ತರು ಸೇರಿದಂತೆ ಹನ್ನೊಂದು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.ಫೆಬ್ರವರಿ 24 ರಂದು ಇಬ್ಬರು ಅಪ್ರಾಪ್ತ ವಯಸ್ಕರು ಹುಟ್ಟುಹಬ್ಬದ ಪಾರ್ಟಿಯಿಂದ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಶ್ರದ್ಧಾ ಕೆರ್ಕೆಟ್ಟಾ ತಿಳಿಸಿದ್ದಾರೆ.
ಪ್ರಕರಣದ ಬಗ್ಗೆ ತಿಳಿದ ಗ್ರಾಮಸ್ಥರು ಕೆಲವು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಬ್ಬರೂ ಅಪ್ರಾಪ್ತ ಬಾಲಕಿಯರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೊಲೀಸರು ಭಾನುವಾರ ಎಲ್ಲಾ 11 ಆರೋಪಿಗಳನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.