alex Certify BIG NEWS : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಪಾಸಾದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಪ್ರೋತ್ಸಾಹ ಧನ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಪಾಸಾದ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಪ್ರೋತ್ಸಾಹ ಧನ ಬಿಡುಗಡೆ

ಬೆಂಗಳೂರು : ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣರಾದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ʻಪ್ರೋತ್ಸಾಹಧನʼ ನೀಡಲು ರಾಜ್ಯ ಸರ್ಕಾರವು ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ನ್ನು ಸರ್ಕಾರದ ಉಲ್ಲೇಖ (1)ರ ಅಧಿಸೂಚನೆಯಲ್ಲಿ ಜಾರಿಗೆ ತರಲಾಗಿರುತ್ತದೆ. ಸದರಿ ನಿಯಮಗಳ ನಿಯಮ 3(3)ರಲ್ಲಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಸೇವಾ ನಿರತ ನೌಕರರಿಗೆ ಸದರಿ ನಿಯಮಗಳು ಜಾರಿಗೆ ಬಂದ ದಿನಾಂಕದಂದು ಸೇವೆಯಲ್ಲಿ ಇದ್ದ ನೌಕರರಿಗೆ ಪ್ರೋತ್ಸಾಹ ಧನ ನೀಡುವ ದೃಷ್ಟಿಯಿಂದ ಸರ್ಕಾರದಿಂದ ಅನುಮೋದಿತ ಏಜೆನ್ಸಿ ಯು ನೀಡುವ ಪ್ರಮಾಣ ಪತ್ರದ ಆಧಾರದ ಮೇಲೆ ರೂ.5000/-ಗಳ ಪ್ರೋತ್ಸಾಹ ಧನವನ್ನು ಕೊಡಲು ಅವಕಾಶ ಕಲ್ಪಿಸಲಾಗಿದೆ.

ದಿನಾಂಕ: 17-04-2021ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಸೇವಾ ನಿರತ ಸರ್ಕಾರಿ ನೌಕರರು ಹಾಜರು ಪಡಿಸುವ ಡಿಜಿಟಲ್ ಸಹಿ ಹೊಂದಿರುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪ್ರಮಾಣ ಪತ್ರವನ್ನು ಪರಿಶೀಲಿಸಿ ಉತ್ತೀರ್ಣರಾದ ದಿನಾಂಕವನ್ನು ಖಚಿತಪಡಿಸಿಕೊಂಡು ಪ್ರೋತ್ಸಾಹ ಧನ ಮಂಜೂರು ಮಾಡಿ ಪಾವತಿಸಲು ಆದೇಶವನ್ನು ಹೊರಡಿಸಿದೆ .

ಇದರನುಸಾರ ಇಲಾಖೆಯ ವಿವಿಧ ಘಟಕ ಕಛೇರಿಗಳಿಂದ ದಿನಾಂಕ: 17-04-2021ರೊಳಗೆ ಕರ್ನಾಟಕ ಸಾಕ್ಷರತಾ ಕಂಪ್ಯೂಟರ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕಾರ್ಯ ನಿರತ ಅಧಿಕಾರಿ/ಸಿಬ್ಬಂದಿಗಳಿಗೆ ಪ್ರೋತ್ಸಾಹ ಧನ ಪಾವತಿಸಲು ಅನುದಾನ ಹಂಚಿಕೆ ಮಾಡುವಂತೆ ಕೋರಿ ಸಲ್ಲಿಸಲಾದ ವರದಿಗಳನ್ನು ಪರಿಗಣಿಸಿ ಅರ್ಹ ಪ್ರಕರಣಗಳಲ್ಲಿ ತಲಾ ರೂ.5000/-ರಂತೆ ಪ್ರೋತ್ಸಾಹ ಧನ ಪಾವತಿಸಲು ಸರ್ಕಾರ ರೂ.77.45 ಲಕ್ಷ ಇಲಾಖೆಗೆ ಬಿಡುಗಡೆ ಮಾಡಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...