ಬೆಂಗಳೂರು : ದಿನಾಂಕ 29.12.2024 ರಂದು ಕರ್ನಾಟಕ ಲೋಕಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಪೂರ್ವಭಾವಿ ಪರೀಕ್ಷೆ ಹಿನ್ನೆಲೆಯಲ್ಲಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸುವ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸುತ್ತೋಲೆ ಹೊರಡಿಸಿದೆ.
ಏನಿದೆ ಸುತ್ತೋಲೆಯಲ್ಲಿ..?
ದಿನಾಂಕ 29.12.2024 ರಂದು ಕರ್ನಾಟಕ ಲೋಕಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಪೂರ್ವಭಾವಿ ಪರೀಕ್ಷೆ ನಡೆಸಲಿದ್ದು, ಬೆಂಗಳೂರಿನಲ್ಲಿ ವಾಸಿಸುತ್ತಿರುವಂತಹ ಸುಮಾರು ಅಭ್ಯರ್ಥಿಗಳಿಗೆ ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲಾಗಳಾದ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ಇನ್ನಿತರೆ ಜಿಲ್ಲೆಗಳಿಗೆ ಪರೀಕ್ಷೆ ಕೇಂದ್ರಗಳನ್ನು ಗುರುತಿಸಿದ್ದು ನಿಗದಿತ ಸಮಯದೊಳಗೆ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಿಗೆ ಹೆಚ್ಚುವರಿ ಬಸ್ಗಳ ವ್ಯವಸ್ಥೆಯನ್ನು ಕಲ್ಪಿಸುವಂತೆ ಎಕ್ಸ್ ಖಾತೆ ಮೂಲಕ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಸುಮಾರು ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದು ತ್ಯರಿತಗತಿಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ನಿಯಮಾನುಸಾರ ಸಾರಿಗೆ ಸೌಲಭ್ಯವನ್ನು ಕಲ್ಪಿಸಲು ಸನ್ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿರವರು ಕೋರಿರುತ್ತಾರೆ.
ಅದರಂತೆ, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ಅಡಚಣೆಯಾಗದಂತೆ ಸದರಿ ದಿನಗಳಂದು ವಿಭಾಗದವತಿಯಿಂದ ಪ್ರಮುಖ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಿಂದ ಪರೀಕ್ಷೆ ನಡೆಯುವ ಕೇಂದ್ರ ಸ್ನಾನ ಸ್ಥಳಗಳಿಗೆ ಅವಶ್ಯಕತೆಗೆ ಅನುಗುಣವಾಗಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮಕೈಗೊಳ್ಳುವಂತೆ ಕೋರಲಾಗಿದೆ.