alex Certify BIG NEWS : ‘ವರ್ಗಾವಣೆ’ ನಿರೀಕ್ಷೆಯಲ್ಲಿರುವ ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಯ ಶಿಕ್ಷಕರಿಗೆ ಗುಡ್ ನ್ಯೂಸ್ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ವರ್ಗಾವಣೆ’ ನಿರೀಕ್ಷೆಯಲ್ಲಿರುವ ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಯ ಶಿಕ್ಷಕರಿಗೆ ಗುಡ್ ನ್ಯೂಸ್ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿರುವ ಪ್ರಾಥಮಿಕ, ಪ್ರೌಢಶಾಲೆಯ ಶಿಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. 2024-25ನೇ ಸಾಲಿನಲ್ಲಿ ರಾಜ್ಯದ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳ ವರ್ಗಾವಣೆ ಪ್ರಸ್ತಾವನೆಗಳನ್ನು ಸ್ವೀಕರಿಸಿ ಅನುಮೋದಿಸುವ ಕುರಿತಂತೆ ಆದೇಶ ಹೊರಡಿಸಿದೆ.

ಪ್ರತಿ ವರ್ಷದಂತೆ ಖಾಸಗಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರುಗಳನ್ನು ಅದೇ ಆಡಳಿತ ಮಂಡಳಿಯಿಂದ ನಡೆಯುತ್ತಿರುವಂತಹ ಮತ್ತೊಂದು ಅನುದಾನಿತ ಶಾಲೆಗೆ ಅಥವಾ ಒಂದು ಆಡಳಿತ ಮಂಡಳಿಯ ಶಾಲೆಯಿಂದ ಮತ್ತೊಂದು ಆಡಳಿತ ಮಂಡಳಿಯ ಶಾಲೆಯಲ್ಲಿನ ಖಾಲಿ ಹುದ್ದೆಗಳಿಗೆ ಅನುದಾನಿತ ಶಿಕ್ಷಕರನ್ನು ಕೋರಿಕೆ/ಪರಸ್ಪರ ವರ್ಗಾಯಿಸಲು ಕೋರಿ ಆಡಳಿತ ಮಂಡಳಿಗಳು ಪ್ರಸ್ತಾವನೆಯನ್ನು ಸಲ್ಲಿಸಲು ಕರ್ನಾಟಕ ಶಿಕ್ಷಣ ಕಾಯಿದೆ-1983ರಡಿಯಲ್ಲಿ ರಚಿಸಲಾಗಿರುವ ನಿಯಮಗಳು-1999. ಕಲಂ-12ರಲ್ಲಿ ಅವಕಾಶ ಕಲ್ಪಿಸಲಾಗಿದೆ.

2024-25ನೇ ಶೈಕ್ಷಣಿಕ ಸಾಲಿಗೆ ಖಾಸಗಿ ಅನುದಾನಿತ ಕಾಲಾ ಆಡಳಿತ ಮಂಡಳಿಗಳು ತಮ್ಮ ಅಧೀನದಲ್ಲಿ ನಡೆಯುತ್ತಿರುವ ಶಾಲೆಗಳಲ್ಲಿನ ಶಿಕ್ಷಕರುಗಳ ವರ್ಗಾವಣೆ ಪ್ರಸ್ತಾವನೆಗಳನ್ನು ಸಲ್ಲಿಸಲು ಹಾಗೂ ಪ್ರಕ್ರಿಯೆ ಕೈಗೊಳ್ಳಲು ಕೆಳಕಂಡಂತೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಅದರಂತೆ ವರ್ಗಾವಣೆ ಬಯಸಿರುವ ಶಾಲೆಯಲ್ಲಿ ಮಕ್ಕಳ ಅನುಪಾತಕ್ಕೆ ಅನುಗುಣವಾಗಿ ಶಿಕ್ಷಕರ ಅವಶ್ಯಕತೆಯ ಕುರಿತು ಖಚಿತಪಡಿಸಿಕೊಂಡು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಉಪನಿರ್ದೇಶಕರುಗಳು ನಿಯಮಾನುಸಾರ ಪ್ರಸ್ತಾವನೆಯನ್ನು ಪರಿಶೀಲಿಸಿ ಎಲ್ಲಾ ದಾಖಲೆಗಳನ್ನು ದೃಢೀಕರಿಸಿ ನೂಕ್ತ ಶಿಫಾರಸ್ಸಿನೊಂದಿಗೆ ಸಲ್ಲಿಸತಕ್ಕದ್ದು.

ಯಾವುದೇ ಉಪನಿರ್ದೇಶಕರುಗಳು ಅರ್ಹ ಪ್ರಸ್ತಾವನೆಗಳನ್ನು ಸಲ್ಲಿಸುವಂತಹ ಸಂದರ್ಭದಲ್ಲಿ ಅಪೂರ್ಣ ದಾಖಲೆಗಳನ್ನಾಗಲಿ ಅಥವಾ ಸೂಕ್ತ ಶಿಫಾರಸ್ಸು ಇಲ್ಲದೆ ಸಲ್ಲಿಸುವಂತಿಲ್ಲ ಹಾಗೂ ಅನಗತ್ಯವಾಗಿ ಪತ್ರ ವ್ಯವಹಾರಕ್ಕೆ ಎಡೆ ಮಾಡಿಕೊಡದಂತೆ ಎಚ್ಚರಿಕೆಯನ್ನು ವಹಿಸಿ ಪ್ರಸ್ತಾವನೆಯನ್ನು ನಿಯಮಗಳನ್ವಯ ಪರಿಶೀಲಿಸಿ ಸೂಕ್ತ ಶಿಫಾರಸ್ಸಿನೊಂದಿಗೆ ಕೆಳಕಂಡಂತೆ ನಿಗಧಿಪಡಿಸಿರುವಂತಹ ಕಾಲಮಿತಿಯೊಳಗೆ ಸಂಬಂಧಿಸಿದ ಆಯುಕ್ತಾಲಯಗಳ ಕಛೇರಿಗೆ ಸಲ್ಲಿಸತಕ್ಕದ್ದು. ಹಾಗೂ ನಿಗಧಿಪಡಿಸಿದ ಅವಧಿ ಮೀರಿದ ನಂತರ ಯಾವುದೇ ಪ್ರಸ್ತಾವನೆಗಳನ್ನು ಸಲ್ಲಿಸಬಾರದೆಂದು ಸಹಾ ಸೂಚಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...