alex Certify BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ‘ಇ- ಖಾತಾ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ‘ಇ- ಖಾತಾ’

ಬೆಂಗಳೂರು : ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ಮುಂದೆ ಮನೆ ಬಾಗಿಲಿಗೆ ಇ- ಖಾತಾ ಬರಲಿದೆ.

ಹೌದು. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಆಸ್ತಿ ಮಾಲೀಕರ ಮನೆ ಬಾಗಿಲಿಗೆ ಇ- ಖಾತಾ ತಲುಪಿಸುವ ಅಭಿಯಾನವನ್ನು ಮುಂದಿನ ವಾರದಿಂದ ಆರಂಭಿಸಲಾಗುವುದು. ನಮ್ಮ ವೆಬ್ಸೈಟ್ನಲ್ಲಿ ಲಭ್ಯವಿರುವ ಕರಡು ಇ-ಖಾತಾದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲದಿದ್ದರೆ, ನಮ್ಮ ಸಿಬ್ಬಂದಿ ಅವರ ಮನೆಗೆ ಹೋಗಿ ಅಗತ್ಯ ದಾಖಲೆಗಳನ್ನು ಪಡೆದು ಅಪ್ಲೋಡ್ ಮಾಡಿ ಅಂತಿಮ ಇ-ಖಾತಾ ನೀಡಲಿದ್ದಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ತಿಳಿಸಿದ್ದಾರೆ.

ಶೀಘ್ರವೇ ಸೈಬರ್ ಕೆಫೆಗಳಲ್ಲಿಯೂ ಇ-ಖಾತಾ

ಶೀಘ್ರವೇ ಸೈಬರ್ ಕೆಫೆಗಳಲ್ಲಿಯೂ ಇ-ಖಾತಾ ವಿತರಿಸಲು ಆದೇಶ ಹೊರಡಿಸಲಾಗುವುದು. ಇ-ಖಾತಾ ವಿತರಣೆ ವ್ಯವಸ್ಥೆಗೆ ವೇಗ ನೀಡಲು ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿ, ಬೆಂಗಳೂರು ಒನ್ ಕೇಂದ್ರಗಳ ಜೊತೆಗೆ ಖಾಸಗಿ ಸೈಬರ್ ಕೆಫೆಗಳಲ್ಲಿ ಇ-ಖಾತಾ ವಿತರಿಸಲು ಆದೇಶ ಹೊರಡಿಸಲಾಗುವುದು ಎಂದು ಹೇಳಲಾಗಿದೆ.
ಆಸ್ತಿಗಳ ದಾಖಲೆ ನಕಲು ಮಾಡಿ ಮಾರಾಟ ಸೇರಿ ಮತ್ತಿತರ ಅಕ್ರಮ ತಡೆಗೆ ಆಸ್ತಿಗಳಿಗೆ ಇ-ಖಾತಾ ನೀಡಲಾಗುತ್ತಿದೆ. ಅಂತೆಯೇ ಬೆಂಗಳೂರು ವ್ಯಾಪ್ತಿಯಲ್ಲಿ 22 ಲಕ್ಷಕ್ಕೂ ಹೆಚ್ಚಿನ ಆಸ್ತಿಗಳಿಗೆ ಇ-ಖಾತಾ ವಿತರಿಸುತ್ತಿದ್ದು, ಇದುವರೆಗೆ ಒಂದು ಲಕ್ಷ ಆಸ್ತಿಗಳಿಗೆ ಇ-ಖಾತಾ ವಿತರಣೆ ಕಾರ್ಯ ಪೂರ್ಣಗೊಂಡಿದೆ. ಸದ್ಯ ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿಗಳ ಕಚೇರಿ, ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ವಿತರಿಸಲಾಗುತ್ತಿದೆ. ಈ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ಮುಟ್ಟಿಲ್ಲ. ಹೀಗಾಗಿ ಖಾಸಗಿ ಸೈಬರ್ ಕೇಂದ್ರಗಳ ಮೂಲಕ ಇ-ಖಾತಾ ವಿತರಿಸಲು ಬಿಬಿಎಂಪಿ ಮುಂದಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...