ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಫೆ.20 ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಏನಿದೆ ಆದೇಶದಲ್ಲಿ..?
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ದಿನಾಂಕ: 20.02.2025 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ “ಸಮ್ಮಿಲನ ಸಮಾವೇಶ, ಕಾರ್ಯಾಗಾರ ಹಾಗೂ ಉಪನ್ಯಾಸ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಘದ ಚುನಾಯಿತ ನಿರ್ದೇಶಕರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು ಹಾಗೂ ಪದಾಧಿಕಾರಿಗಳಿಗೆ ದಿನಾಂಕ: 20.02.2025 ರಂದು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಈ ಕೆಳಕಂಡ ಷರತ್ತಿಗೊಳಪಟ್ಟು ಮಂಜೂರು ಮಾಡಲಾಗಿದೆ.
*2024-29ನೇ ಅವಧಿಗೆ ಆಯ್ಕೆಯಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು ಹಾಗೂ ಪದಾಧಿಕಾರಿಗಳು ಪೂರ್ವಾನುಮತಿಯನ್ನು ಪಡೆಯಬೇಕು. ಈ ಆಧಾರದ ಮೇಲೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಕಾರವುಳ್ಳ ಅಧಿಕಾರಿಗಳು ಮಂಜೂರು ಮಾಡತಕ್ಕದ್ದು ಎಂದು ತಿಳಿಸಿದೆ.
