ಬೆಂಗಳೂರು : ರಾಜ್ಯದಲ್ಲಿ ಎಲೆಚುಕ್ಕೆ ರೋಗದ ಆತಂಕ ಮನೆ ಮಾಡಿದ್ದು, ಈ ಹಿನ್ನೆಲೆ ರೋಗದ ಬಗ್ಗೆ ಸಂಶೋಧನೆ ನಡೆಸಲು ಸರ್ಕಾರ 52 ಲಕ್ಷ ರೂ. ಹಣ ಬಿಡುಗಡೆ ಮಾಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿನ ಪ್ರಮುಖ ಬೆಳೆಯಾಗಿರುವ ಅಡಿಕೆ ಬೆಳೆಯನ್ನು ಕಾಡುತ್ತಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕೆ ರೋಗವನ್ನು ನಿವಾರಿಸುವ ಸಲುವಾಗಿ ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ. ಸಂಶೋಧನೆಗಾಗಿ ಈಗಾಗಲೇ ₹ 52 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.