ಬೆಳಗಾವಿ : ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ವಿವಿಧ ಇಲಾಖೆಗಳಲ್ಲಿ ಖಾಲಿ ಉಳಿದಿರುವ ಹುದ್ದೆಗಳ ಭರ್ತಿಗೆ ಸಿದ್ಧತೆ ನಡೆಸಿದೆ.
ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಿದೆ. ಈ ಮೂಲಕ ಗ್ರೂಪ್ ಎ ಹಾಗೂ ಗ್ರೂಪ್ ಬಿ ಹುದ್ದೆಗಳನ್ನು ಇಲಾಖೆವಾರು ಅಗತ್ಯಕ್ಕೆ ಅನುಸಾರ ನೇಮಕ ಅಧಿಸೂಚನೆ ಹೊರಡಿಸಲು, ಪರೀಕ್ಷೆ ಕಾರ್ಯ ನಿರ್ವಹಣೆಗೆ ಸನ್ನದ್ಧವಾಗುವಂತೆ ಸರ್ಕಾರ ಸೂಚನೆ ನೀಡಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಒಟ್ಟು 2,55,920 ಹುದ್ದೆಗಳು ಖಾಲಿಯಿದ್ದು, ಈ ಪೈಕಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ 7,567 ಅಧಿಕಾರಿ, 54, 578 ಸಿಬ್ಬಂದಿ ಸೇರಿ 62,145, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 3,426 ಅಧಿಕಾರಿ, 31,770 ಸೇರಿ 35,196 ಹುದ್ದೆಗಳು ಖಾಲಿ ಇವೆ.