ಬೆಂಗಳೂರು : ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಏರ್ಪಡಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ.
2024-25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಉಲ್ಲೇಖ (1)ರ ಸರ್ಕಾರಿ ಆದೇಶದಲ್ಲಿ 2023-24 ಹಾಗೂ 2024-25ನೇ ಸಾಲಿನ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಸರ್ಕಾರದಿಂದ ಬಿಡುಗಡೆಯಾದ ರೂ.200.00 ಲಕ್ಷಗಳನ್ನು ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಈಗಾಗಲೇ ಬಿಡುಗಡೆ 17-08-2025 80 19-08-2025 0 2023-24 ~ 2024-25 ನೇ ಸಾಲಿನ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಬೆಂಗಳೂರಿನಲ್ಲಿ ಜರುಗಿರುತ್ತದೆ.
ಈ ಹಿನ್ನೆಲೆಯಲ್ಲಿ ದಿನಾಂಕ: 03-02-2025ರಂದು ಮಾನ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ 2024-25ನೇ ಸಾಲಿನ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಜಿಲ್ಲಾ ಮಟ್ಟದಲ್ಲಿ ಆಯೋಜಿಸುವ ಸಂಬಂಧ ರಾಜಾಧಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಹಾಗೂ ಸಂಘದ ಪದಾಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಗಿದ್ದು ಜಿಲ್ಲಾ ಮಟ್ಟದಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟಗಳನ್ನು ಸಂಘಟಿಸುವಂತೆ ಮನವಿ ಮಾಡಿರುತ್ತಾರೆ.’
2024-25 ನೇ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ವಲಯದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಕೆಲವು ಜಿಲ್ಲೆಗಳಲ್ಲಿ ಅನುದಾನವನ್ನು ಮೀಸಲಿಟ್ಟಿರುವುದನ್ನು ಕೆಲವು ಸಹಾಯಕ ನಿರ್ದೇಶಕರು ಆಯುಕ್ತಾಲಯದ ಗಮನಕ್ಕೆ ತಂದಿರುತ್ತಾರೆ.ಈ ಹಿನ್ನಲೆಯಲ್ಲಿ ಎಲ್ಲಾ ಜಿಲ್ಲೆಗಳ ಉಪ/ಸಹಾಯಕ ನಿರ್ದೇಶಕರುಗಳು ಜಿಲ್ಲಾ ಮಟ್ಟದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಸಂಬಂಧಪಟ್ಟ ಜಿಲ್ಲೆಗಳ ಜಿಲಾ ಪಂಚಾಯತ್ ಮುಖ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸದರಿ “ವಿಷಯದ ಕುರಿತು ಚರ್ಚಿಸಿ, ಅನುದಾನವು ವಪಗತವಾಗದಂತೆ 2025ನೇ ಮಾರ್ಚ್ ಅಂತ್ಯದೊಳಗೆ ಎಲ್ಲಾ ಜಿಲ್ಲೆಗಳಲ್ಲಿ ಅನುಬಂಧ-01 ರಲ್ಲಿ ತಿಳಿಸಿರುವಂತೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ನಿಯಮಾವಳಿಗಳನ್ವಯ ಆಯೋಜಿಸಲು ಈ ಮೂಲಕ ಸೂಚಿಸಿದೆ.



