alex Certify BIG NEWS : ರಾಜ್ಯ ಸರ್ಕಾರದಿಂದ ‘ಗ್ರಾಮ ಪಂಚಾಯತ್ ಕಛೇರಿ’ ಕಾರ್ಯವಿಧಾನ, ಕೈಪಿಡಿ ಬಿಡುಗಡೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯ ಸರ್ಕಾರದಿಂದ ‘ಗ್ರಾಮ ಪಂಚಾಯತ್ ಕಛೇರಿ’ ಕಾರ್ಯವಿಧಾನ, ಕೈಪಿಡಿ ಬಿಡುಗಡೆ.!

ಬೆಂಗಳೂರು : ರಾಜ್ಯ ಸರ್ಕಾರ ಗ್ರಾಮ ಪಂಚಾಯತ್ ಕಛೇರಿ ಕಾರ್ಯವಿಧಾನ, ಕೈಪಿಡಿ ಬಿಡುಗಡೆ ಮಾಡಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14)ರ ಪ್ರಕರಣ 311 ರ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತ್ ಕಛೇರಿ ಕಾರ್ಯವಿಧಾನ ಕೈಪಿಡಿ) ನಿಯಮಗಳು, 2024ರ ಕರಡನ್ನು ಇದರಿಂದ ಬಾಧಿತರಾಗುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಸದರಿ ಅಧಿನಿಯಮದ ಪ್ರಕರಣ 311 ರಲ್ಲಿ ನಿಗದಿಪಡಿಸಿದಂತೆ ಪ್ರಕಟಿಸಲಾಗಿದೆ ಮತ್ತು ಈ ಮೂಲಕ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಿ, ಸದರಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಈ ನಿಯಮಗಳು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿತವಾದ ದಿನಾಂಕದಿಂದ ಹದಿನೈದು ದಿನಗಳೊಳಗಾಗಿ ಕಳುಹಿಸಲು ಸೂಚಿಸಲಾಗಿದೆ.

ನಿಗದಿಪಡಿಸಿದ ಅವಧಿಯು ಮುಕ್ತಾಯವಾಗುವ ಮೊದಲು ಸದರಿ ಕರಡಿಗೆ ಸಂಬಂಧಿಸಿದಂತೆ ಯಾವೊಬ್ಬ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಆಕ್ಷೇಪಣೆ ಮತ್ತು ಸಲಹೆಗಳನ್ನು, ರಾಜ್ಯ ಸರ್ಕಾರವು ಪರಿಗಣಿಸುವುದು. ಆಕ್ಷೇಪಣೆಗಳನ್ನು ಅಥವಾ ಸಲಹೆಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬಹುಮಹಡಿಗಳ ಕಟ್ಟಡ, 3ನೇ ಹಂತ, 3ನೇ ಮಹಡಿ, ಡಾ|| ಅಂಬೇಡ್ಕರ್ ವೀದಿ, ಬೆಂಗಳೂರು-01, ಇವರಿಗೆ ಕಳುಹಿಸಲು ಕೋರಲಾಗಿದೆ.

ಕರಡು ನಿಯಮಗಳು
1.ಹೆಸರು ಮತ್ತು ಪ್ರಾರಂಭಿಕ: 1) ಈ ನಿಯಮಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು
ಪಂಚಾಯತ್ ರಾಜ್ (ಗ್ರಾಮ ಪಂಚಾಯತ್ ಕಛೇರಿ ಕಾರ್ಯವಿಧಾನ ಕೈಪಿಡಿ) ನಿಯಮಗಳು, 2024 ಎಂದು ಕರೆಯತಕ್ಕದ್ದು.
2) ಇವು ರಾಜ್ಯಪತ್ರದಲ್ಲಿ ಅಂತಿಮವಾಗಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರುತ್ತದೆ.
2). ಪರಿಭಾಷೆಗಳು:
> ಅಧ್ಯಕ್ಷರು: ಎಂದರೆ ಗ್ರಾಮ ಪಂಚಾಯಿತಿ ಅಧ್ಯಕ್ಷರು.
> ಉಪಾಧ್ಯಕ್ಷರು ಎಂದರೆ ಗ್ರಾಮ ಪಂಚಾಯತಿ ಉಪಾಧ್ಯಕ್ಷರು.
> ಪಂಚಾಯಿತಿ ಅಭಿವೃದ್ಧಿ ಅಧಿಕಾರಿ: ಎಂದರೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...