BIG NEWS: GST ಅಧಿಕಾರಿಗಳ ದಾಳಿ; BJP ಟಿಕೆಟ್ ಆಕಾಂಕ್ಷಿಗೆ ಸೇರಿದ 3 ಕೋಟಿ ಮೌಲ್ಯದ ವಸ್ತುಗಳು ವಶಕ್ಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲೆಡೆ ಕಾಂಚಾಣ, ಗಿಫ್ಟ್ ಗಳದ್ದೇ ಸದ್ದು ಕೇಳುತ್ತಿದೆ. ರಾಜಧಾನಿ ಬೆಂಗಳೂರಿನಲ್ಲಿ ಜಿ ಎಸ್ ಟಿ ಅಧಿಕಾರಿಗಳು ನಡೆಸಿದ ದಿಢೀರ್ ದಾಳಿಯಲ್ಲಿ ಮತದಾರರಿಗೆ ಹಂಚಲು ತಂದಿದ್ದ ಬರೋಬ್ಬರಿ 3 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಯಲಹಂಕ ಬಳಿಯ ಇಂಟರ್ ನ್ಯಾಷನಲ್ ಶಾಲೆ ಹಿಂಭಾಗದ ಗೋಡೌನ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 3 ಕೋಟಿ ಮೌಲ್ಯದ ಕುಕ್ಕರ್, ಗಡಿಯಾರಗಳನ್ನು ಜಪ್ತಿ ಮಾಡಿದ್ದಾರೆ.

ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುನೇಂದ್ರ ಕುಮಾರ್ ಗೆ ಸೇರಿದ ವಸ್ತುಗಳಿವು ಎನ್ನಲಾಗಿದ್ದು, ಮತದಾರರಿಗೆ ಹಂಚಲು ಸಂಗ್ರಹಿಸಲಾಗಿತ್ತು ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read