ಹಾಸನ : ಹಾಸನ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಿಗೆ ಢವ ಢವ ಶುರುವಾಗಿದೆ. ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳು ಬಂಧನ ಭೀತಿಯಿಂದ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳು ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮೇ.28 ಕ್ಕೆ ನಿಗದಿ ಮಾಡಿದೆ.
ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಹಾಸನದ 5 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿತ್ತು. ಆರೋಪಿಗಳಾದ ನವೀನ್ ಗೌಡ, ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್, ಕಾಂಗ್ರೆಸ್ ಮುಖಂಡ ಪುಟ್ಟರಾಜು, ಹಾಗೂ ಚೇತನ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು . ಈ ಹಿನ್ನೆಲೆ ಇಂದು ಜಾಮೀನು ಕೋರಿ ಆರೋಪಿಗಳು ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಅರ್ಜಿಯ ವಿಚಾರಣೆಯನ್ನು ಮೇ.28 ಕ್ಕೆ ನಿಗದಿ ಮಾಡಿದೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಬಗ್ಗೆ ದೂರು ಆಲಿಸಲು ಎಸ್ಐಟಿ ಅಧಿಕಾರಿಗಳು ಲೈಂಗಿಕ ದೌರ್ಜನ್ಯ ಸಂತ್ರಸ್ಥೆಯರಿಗೆಂದೇ ಸಹಾಯವಾಣಿ(6360938947) ಆರಂಭಿಸಿದೆ. ಪ್ರತಿನಿತ್ಯವು ಸಹಾಯವಾಣಿಗೆ ಕರೆ ಮಾಡುತ್ತಿರುವ ಸಂತ್ರಸ್ತೆಯರು ಮತ್ತು ಅವರ ಸಂಬಂಧಿಕರು ದಯವಿಟ್ಟು ವಿಡಿಯೋಗಳನ್ನು ಅಳಿಸಿ ನಮ್ಮ ಮರ್ಯಾದೆ ಕಾಪಾಡಿ ಎಂದು ಮನವಿ ಮಾಡುತ್ತಿದ್ದಾರೆ.