![](https://kannadadunia.com/wp-content/uploads/2022/06/Karnataka_high_court_EPS1479.jpg)
ಬೆಂಗಳೂರು : 2023-24 ನೇ ಸಾಲಿನಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊಳವೆ ಬಾವಿ ಕೊರೆಯಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕರೆದಿದ್ದ ಟೆಂಡರ್ ಅನ್ನು ಹೈಕೋರ್ಟ್ ರದ್ದು ಪಡಿಸಿ ಆದೇಶ ಹೊರಡಿಸಿದೆ.
ಗಂಗಾ ಕಲ್ಯಾಣ ಯೋಜನೆ ಟೆಂಡರ್ ನಲ್ಲಿ ಕೆಲವು ಷರತ್ತುಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಚಿನ್ನಪ್ಪರೆಡ್ಡಿ ಸೇರಿದಂತೆ ಹಲವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಇದೀಗ ಕೊಳವೆ ಬಾವಿ ಟೆಂಡರ್ ನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.
ಗಂಗಾ ಕಲ್ಯಾಣ ಯೋಜನೆಗೆ ಸಂಬಂಧಿಸಿದಂತೆ ನಿಯಮಗಳ ಪ್ರಕಾರ ಟೆಂಡರ್ ಕರೆಯಲು ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.