alex Certify BIG NEWS: ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಇಂದು HDK ನಾಮಪತ್ರ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಇಂದು HDK ನಾಮಪತ್ರ ಸಲ್ಲಿಕೆ

ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಇಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಕುಮಾರಸ್ವಾಮಿಯವರಿಗೆ ಗೋವಾ ಮುಖ್ಯಮಂತ್ರಿ ಸಾವಂತ್ ಸೇರಿದಂತೆ ಹಲವು ಬಿಜೆಪಿ ನಾಯಕರು ಸಹ ಸಾಥ್ ನೀಡಲಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ, ಹಾಸನ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲಾಗಿದೆ.

ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿರುವ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಇಂದು ಅಂತಿಮ ದಿನವಾಗಿದ್ದು, ಹೀಗಾಗಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಘಟಾನುಘಟಿ ನಾಯಕರುಗಳು ಇಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...