ಬೆಂಗಳೂರು : ಅಂಗಾಂಗ ಸಾಗಣೆಗೆ ಅನುಕೂಲ ಆಗುವ ನಿಟ್ಟಿನಲ್ಲಿ ರಾಜ್ಯದ ಆಸ್ಪತ್ರೆಗಳಲ್ಲಿ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗುತ್ತದೆ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಸಂಭಾವ್ಯ ಅಂಗಾಂಗ ದಾನಿಗಳ ಗುರುತಿಸುವಿಕೆ ಮತ್ತು ಸುರಕ್ಷಿತ ಅಂಗಾಂಗ ದಾನ ಪ್ರಕ್ರಿಯೆಗೆ ಕುಟುಂಬ ಸಮಾಲೋಚನೆ, ಉನ್ನತ ಮಟ್ಟದ ಐಸಿಯು ಆರೈಕೆ ಮತ್ತು ಕಾನೂನು ಕ್ರಮಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿಗೆ 1 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಅಂಗಾಂಗ ಸಾಗಣೆಗೆ ಅನುಕೂಲ ಆಗಲೆಂದು ಆಸ್ಪತ್ರೆಯಲ್ಲಿ ಹೆಲಿಪ್ಯಾಡ್ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಶರಣ ಪ್ರಕಾಶ್ ಪಾಟೀಲ್ l ತಿಳಿಸಿದ್ದಾರೆ.