ಬೆಳಗಾವಿ : ರಾಜ್ಯ ಸರ್ಕಾರವು ರಾಜ್ಯದ ಪ್ರಮುಖ ವಿಮಾನ ನಿಲ್ದಾಣಗಳಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ವೀರರಾಣಿ ಕಿತ್ತೂರು ಚನ್ನಮ್ಮ ಹೆಸರಿಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದ್ದು, ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಕನ್ನಡಿಗರ ಹೆಸರನ್ನು ರಾಜ್ಯದ ವಿಮಾನ ನಿಲ್ದಾಣಗಳಿಗೆ ಇರಿಸುವ ಮೂಲಕ ಅವರ ಹೆಸರನ್ನು ಶಾಶ್ವತವಾಗುಳಿಸುವ ಪ್ರಯತ್ನ ನಮ್ಮದು. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮ ಎಂಬ ಹೆಸರಿಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಹೇಳಿದ್ದಾರೆ.