alex Certify BIG NEWS : ಹುಬ್ಬಳ್ಳಿಯ ‘ಅಂಜಲಿ ಅಂಬಿಗೇರ’ ಹತ್ಯೆ ಪ್ರಕರಣ : ಹಂತಕ ಗಿರೀಶ್ CID ವಶಕ್ಕೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಹುಬ್ಬಳ್ಳಿಯ ‘ಅಂಜಲಿ ಅಂಬಿಗೇರ’ ಹತ್ಯೆ ಪ್ರಕರಣ : ಹಂತಕ ಗಿರೀಶ್ CID ವಶಕ್ಕೆ..!

ಬೆಂಗಳೂರು : ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ ಗಿರೀಶ್ ನನ್ನು ಸಿಐಡಿ ವಶಕ್ಕೆ ಪಡೆದಿದೆ.

ಗಾಯಗೊಂಡಿದ್ದ ಗಿರೀಶ್ ಗೆ ನಗರದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆಸ್ಪತ್ರೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದು ಕೋರ್ಟ್ ಗೆ ಹಾಜರುಪಡಿಸಿದರು.

ಹುಬ್ಬಳ್ಳಿಯ ವೀರಾಪುರ ಓಣಿಗೆ ಬಂದ ಗಿರೀಶ್ ಸಾವಂತ್ ಅಂಜಲಿ ಅಂಬಿಗೇರ ಅವರ ಮನೆಗೆ ಹೋಗಿ ಆಕೆಯ ಮೇಲೆ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಹತ್ಯೆ ಮಾಡಿ ಓಡಿ ಹೋಗಿದ್ದ. ಈತ ಓಡಿ ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...