alex Certify BIG NEWS: IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಅವರ ವಿರುದ್ಧ ಕೇಳಿ ಬಂದಿರುವ ಆರೋಪಗಳಿಗೆ ಸಂಬಂಧಿಸಿದಂತೆ ನೋಟೀಸ್ ಜಾರಿ ಮಾಡಲಾಗಿದೆ.

ರೋಹಿಣಿ ಸಿಂಧೂರಿ ಮೈಸೂರು ಡಿಸಿ ಆಗಿದ್ದ ಸಂದರ್ಭದಲ್ಲಿ ಅವರ ವಿರುದ್ಧ ಒಟ್ಟು 5 ಆರೋಪಗಳು ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸರ್ಕಾರದ ಕಾರ್ಯದರ್ಶಿ ಡಾ.ಜೆ.ರವಿಶಂಕರ್ ನೋಟೀಸ್ ಜಾರಿ ಮಾಡಿದ್ದು, ನಾಳೆ ಬೆಳಿಗ್ಗೆ ಕಚೇರಿಗೆ ಹಾಜರಾಗಿ ಉತ್ತರಿಸುವಂತೆ ಸೂಚಿಸಿದ್ದಾರೆ.

ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ವಿಚಾರವಾಗಿ ಕೋಟ್ಯಂತರ ಹಣ ಅಕ್ರಮ, ಪಾರಂಪರಿಕ ಕಟ್ಟಡದಲ್ಲಿ ಅಕ್ರಮವಾಗಿ ಈಜುಕೊಳ ನಿರ್ಮಾಣ, ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನೆಲಹಾಸು, ಚಾಮರಾಜನಗರ ಜಿಲ್ಲಾಸ್ಪತ್ರೆಯ ಆಕ್ಸಿಜನ್ ದುರಂತ ಸೇರಿದಂತೆ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾ.ರಾ.ಮಹೇಶ್ ಗಂಭೀರ ಆರೋಪ ಮಾಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...