ಬೆಂಗಳೂರು : ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ತಯಾರಿಸಲು ಐಸಿಎಂಆರ್ ಒಪ್ಪಿಗೆ ಸೂಚಿಸಿದೆ. ಹೈದರಾಬಾದ್ ಸಂಸ್ಥೆ ಸಂಶೋಧನೆ ನಡೆಸಲಿದೆ. ಮುಂದಿನ ವರ್ಷಕ್ಕೆ ಮಂಗನ ಕಾಯಿಲೆಗೆ ಒಳ್ಳೆಯ ಚುಚ್ಚುಮದ್ದು ಸಿಗುವ ನಿರೀಕ್ಷೆಯಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಳೆಗಾಲ ಆರಂಭ ಮತ್ತು ಅಂತ್ಯದಲ್ಲಿ ಮಂಗನ ಕಾಯಿಲೆ ಹೆಚ್ಚಳವಾಗುತ್ತದೆ. ಮಾರ್ಚ್ ವರೆಗೆ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಲಕ್ಷಣಗಳು ಬಂದ ಕೂಡಲೇ ಚಿಕಿತ್ಸೆ ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಮಂಗನ ಕಾಯಿಲೆಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಚಿಕಿತ್ಸೆ ನೀಡಲು ಈಗಾಗಲೇ ಸೂಚಿಸಲಾಗಿದೆ. ಅಲ್ಲದೇ ಕೆ.ಎಫ್.ಡಿ ಪಾಸಿಟಿವ್ ಬಂದವರನ್ನ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.