ಬೆಂಗಳೂರು : ರಾಜ್ಯದಲ್ಲಿ ಬಡವರ ಪಡಿತರ ಚೀಟಿ ರದ್ದಾದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣವೇ ವಾಪಸ್ ನೀಡಬೇಕು. ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಒಂದು ವೇಳೆ ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು. ಅರ್ಹರಿಗೆ ಬಿಪಿಎಲ್ ತಪ್ಪಿ ಹೋಗಬಾರದು. ಆಕಸ್ಮಾತ್ ತಪ್ಪಿ ಹೋಗಿದ್ದರೆ ವಾಪಸ್ ಕೊಡಲಾಗುವುದು. ಹಾಗೆಯೇ ಪಡಿತರ ಚೀಟಿ ಇಲ್ಲವೆಂದು ಆರೋಗ್ಯ ಸೌಲಭ್ಯ ವಿಚಾರದಲ್ಲಿ ಯಾವುದೇ ತೊಂದರೆ… pic.twitter.com/dD7ldo6UMT
— DIPR Karnataka (@KarnatakaVarthe) November 21, 2024