alex Certify BIG NEWS: IIScಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: IIScಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಐಐಎಸ್ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರಕ್ಕೆ ಚಾಲನೆ ನೀಡಿದರು.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದಿಳಿದ ಪ್ರಧಾನಿ ಮೋದಿಯವರನ್ನು ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಜ್ಯ ಬಿಜೆಪಿ ನಾಯಕರು ಸ್ವಾಗತಿಸಿದರು. ಬಳಿಕ ಯಲಹಂಕವಾಯುನೆಲೆಯಿಂದ ಹೆಲಿಕಾಪ್ಟರ್ ನಲ್ಲಿ ಮೇಖ್ರಿ ಸರ್ಕಲ್ ನ HQTCಗೆ ತೆರಳಿ ಅಲ್ಲಿಂದ ಭಾರತೀಯ ವಿಜ್ಞಾನ ಭವನ (IISc)ಗೆ ರಸ್ತೆ ಮಾರ್ಗದ ಮೂಲಕ ತೆರಳಿದರು.

ಭಾರತೀಯ ವಿಜ್ಞಾನ ಭವನದಲ್ಲಿ ಮೆದುಳು ಸಂಶೋಧನಾ ಕೇಂದ್ರವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಇದಕ್ಕೂ ಮುನ್ನ ಮೇಖ್ರಿ ಸರ್ಕಲ್ ಬಳಿ ಪ್ರಧಾನಿ ಮೋದಿ ಆಗಮಿಸುತ್ತಿದ್ದಂತೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಮೋದಿ…ಮೋದಿ… ಎಂದು ಜಯಘೋಷಗಳನ್ನು ಕೂಗಿ ಸಂಭ್ರಮಿಸಿದರು. ಈ ವೇಳೆ ಪ್ರಧಾನಿ ಮೋದಿ ವಾಹನ ನಿಲ್ಲಿಸಿ ಜನರತ್ತ ಕೈ ಬೀಸಿ ಧನ್ಯವಾದಗಳನ್ನು ಅರ್ಪಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...