ಬೆಳಗಾವಿ: ರಾಜ್ಯದಲ್ಲಿ ಮತ್ತೆ ಕೊರೊನಾ ಭೀತಿ ಎದುರಾಗಿರುವ ಹಿನ್ನಲೆಯಲ್ಲಿ ಕರ್ನಾಟಕಕ್ಕೆ ಕೊರೊನಾ ನಿಯಂತ್ರಣಕ್ಕೆ ಕೋವಿಡ್ ಸಲಹಾ ಸಮಿತಿ ಗೈಡ್ ಲೈನ್ ಸೂಚಿಸಿದೆ. ಸಲಹಾ ಸಮಿತಿ ಸಲಹೆಯಂತೆ ಕ್ರಮ ಕೈಗೊಳ್ಳಲು ಸಿಎಂ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ಸಭೆ ಬಳಿಕ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ಒಳಾಂಗಣ ಪ್ರದೇಶದಲ್ಲಿ ಮಾಸ್ಕ್ ಧರಿಸಲು ಸಲಹೆ ನೀಡಲಾಗಿದೆ. ILI ಮತ್ತು SARI ಕೇಸ್ ಗಳ ಟೆಸ್ಟಿಂಗ್ ಹೆಚ್ಚಿಸಲು ತಜ್ಞರು ಸಲಹೆ ನೀಡಿದ್ದಾರೆ ಎಂದರು.
ಆಕ್ಸಿಜನ್ ಪಾಲಂಟ್ ಮಾಡಲು ತೀಮಾನಿಸಲಾಗಿದೆ. ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಗಾಗಿ ಹಾಸಿಗೆ ಮೀಸಲಿಡಲು ಸೂಚನೆ. ಖಾಸಗಿ ಆಸ್ಪತ್ರೆಗಳಿಗೂ ಈ ಸೂಚನೆ ನೀಡಲಾಗುವುದು. 3ನೇ ಡೋಸ್ ಲಸಿಕಾಕರಣ ಮಾಡಲು ನಿರ್ಧಾರ ಮಾಡಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ರ್ಯಾಂಡಮ್ ಟೆಸ್ಟ್ ಗೆ ಮಾಡಲಾಗುವುದು ಎಂದು ತಿಳಿಸಿದರು.
ಯಾರು ಮೂರನೇ ಡೋಸ್ ಪಡೆದುಕೊಂಡಿಲ್ಲ ಅಂತವರು ತಕ್ಷಣ ಮೂರನೇ ಡೋಸ್ ಲಸಿಕೆ ಪಡೆದುಕೊಳ್ಳಿ. ಈ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ಮುಂಜಾಗೃತಾ ಕ್ರಮ ಹಾಗೂ ಮಾರ್ಗಸೂಚಿ ಬಗ್ಗೆ ಇಂದು ಸಂಜೆ ವೇಳೆಗೆ ಸ್ಪಷ್ಟ ಮಾಹಿತಿ ಹೊರಡಿಸಲಾಗುವುದು ಎಂದು ತಿಳಿಸಿದರು.