ಬೆಂಗಳೂರು : ಜುಲೈ 4 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ರಾಜ್ಯದಲ್ಲಿ ವಿವಿಧ ಯೋಜನೆ, ಕಾಮಗಾರಿ, ಹಣ ಬಿಡುಗಡೆ, ವಿವಿಧ ಪ್ರಕರಣಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚರ್ಚೆ ನಡೆಯಲಿದೆ.
ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿನಾಂಕ: 04.07.2024, ಗುರುವಾರ ಬೆಳಿಗ್ಗೆ 11:00 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 11ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದಿದ್ದಾರೆ.