alex Certify BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2023-24ನೇ ಸಾಲಿನಲ್ಲಿ ಕೆಲ ಸ್ನಾತಕೊತ್ತರ ಹಾಗೂ ವೃತ್ತಿಪರ ಪದವಿ ಕೋರ್ಸ್ಗಳ ಕೌನ್ಸಿಂಗ್ ತಡವಾಗಿ ಪ್ರಾರಂಭವಾಗಿದ್ದರಿಂದ, ಕಳೆದ ಶೈಕ್ಷಣಿಕ ವರ್ಷದ ಫಲಿತಾಂಶ ಹೊರ ಬೀಳುವುದು ತಡವಾಗಿದೆ. ಈ ಹಿನ್ನಲೆಯಲ್ಲಿ ಹಿಂದುಳಿದ ವರ್ಗಗಳು ಮತ್ತು ಪ್ರವರ್ಗ-1ರ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳ ಶುಲ್ಕ ಮರು ಪಾವತಿ ಅರ್ಜಿ ಸಲ್ಲಿಕೆ ಅವಧಿಯನ್ನು ಮಾರ್ಚ್ 30 ವರೆಗೆ ವಿಸ್ತರಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ವೆಬ್ಸೈಟ್ https://ssp.postmatric.karnataka.gov.in/ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಮಾಹಿತಿಗಾಗಿ ವೆಬ್ಸೈಟ್ https://bcwd.karnataka.gov.in ಭೇಟಿ ನೀಡಬಹುದು.

ಇಲಾಖೆ ಸಹಾಯವಾಣಿ 8050770005 ಹಾಗೂ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ 1902ಗೆ ಕರೆ ಮಾಡಬಹುದು. bcwdhelpline@gmail.com ಮತ್ತು postmatrichelp@karnataka.gov.in ಇಮೇಲ್ ಮಾಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...