alex Certify BIG NEWS : ರಾಜ್ಯದ ಶಾಲೆಯ ‘ಅಡುಗೆ ಸಿಬ್ಬಂದಿ’ ಗಳನ್ನು ಸೇವೆಯಿಂದ ಬಿಡುಗಡೆ ಮಾಡುವ ಕುರಿತು ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ಶಾಲೆಯ ‘ಅಡುಗೆ ಸಿಬ್ಬಂದಿ’ ಗಳನ್ನು ಸೇವೆಯಿಂದ ಬಿಡುಗಡೆ ಮಾಡುವ ಕುರಿತು ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ ಶಾಲೆಯ ‘ಅಡುಗೆ ಸಿಬ್ಬಂದಿ’ ಗಳನ್ನು ಸೇವೆಯಿಂದ ಬಿಡುಗಡೆ ಮಾಡುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮಧ್ಯಾಹ್ನ ಉಪಾಹಾರ ಯೋಜನೆಯ ಅಡುಗೆ ಸಿಬ್ಬಂದಿಯನ್ನು ವಾರ್ಷಿಕ ಹತ್ತು ತಿಂಗಳ ತಾತ್ಕಾಲಿಕ ಸೇವೆಯನ್ನು ಪೊರೈಸಿದ ನಂತರ 31ನೇ-ಮಾರ್ಚ ಅಂತ್ಯಕ್ಕೆ ಸೇವೆಯಿಂದ ಕೈಬಿಡುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2024-25 ನೇ ಸಾಲಿನ ಪಿಎಂಪೋಷಣ್-ಮಧ್ಯಾಹ್ನ ಉಪಹಾರ ಯೋಜನೆ ಕಾರ್ಯಕ್ರಮದಡಿಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಜೂನ್-2024 ಮಾಹೆಯಿಂದ ಮಾರ್ಚ್-2025 ರ ಮಾಹೆಯವರೆಗೆ ಒಟ್ಟು 10 ತಿಂಗಳ ಅವಧಿಗೆ ಯೋಜನೆಯನ್ನು ನಡೆಸಲು ಅನುಮೋದನೆ ನೀಡಿರುತ್ತದೆ. ಸದರಿ ಅವಧಿಗೆ ಸರ್ಕಾರಿ/ಅನುದಾನಿತ ಪ್ರಾಥಮಿಕ/ಪ್ರೌಢ ಶಾಲೆಗಳಲ್ಲಿ ಅಡುಗೆ ತಯಾರಿಸಿ ವಿತರಿಸುವ ಕೆಲಸಕ್ಕೆ ತಾತ್ಕಾಲಿಕವಾಗಿ ಅಡುಗೆ ಸಿಬ್ಬಂದಿಯ ಸೇವೆಯನ್ನು ಪಡೆದುಕೊಂಡಿದ್ದು, ಈ ಅವಧಿಗೆ ಮಾಸಿಕ ಗೌರವ ಸಂಭಾವನೆಯನ್ನು ವಿತರಿಸಲಾಗಿರುತ್ತದೆ.

2024-25ನೇ ಸಾಲಿನಲ್ಲಿ ಯೋಜನೆಯ ಅವಧಿ 31ನೇ ಮಾರ್ಚ್ ಅಂತ್ಯಕ್ಕೆ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ, ಯೋಜನೆಯಡಿ ತಾತ್ಕಾಲಿಕವಾಗಿ ಸೇವೆ ನಿರ್ವಹಿಸಿದ ಅಡುಗೆ ಸಿಬ್ಬಂದಿಯನ್ನು ದಿನಾಂಕ: 31.3.2025ರಂದು ಬಿಡುಗಡೆಗೊಳಿಸುವಂತೆ ಶಾಲೆಯ ಮುಖ್ಯ ಶಿಕ್ಷಕರಿಗೆ ಸೂಚಿಸಲು ತಿಳಿಸಿದೆ. ಈ ರೀತಿ ಬಿಡುಗಡೆಗೊಳಿಸಿದ ಅಡುಗೆ ಸಿಬ್ಬಂದಿಯನ್ನು 2025-26 ನೇ ಶೈಕ್ಷಣಿಕ ಸಾಲಿಗೂ ಮುಂದುವರೆಸಲು ಅಗತ್ಯ ಕ್ರಮ ವಹಿಸುವುದು. ಈ ಸಂಬಂಧ ಶಾಲಾ ಪ್ರಾರಂಭದ ದಿನದಿಂದ ಇವರನ್ನು ತಾತ್ಕಾಲಿಕ ಸೇವೆಗೆ ಪಡೆಯುವುದು. ಈ ಸಂದರ್ಭದಲ್ಲಿ ಅಡುಗೆ ಸಿಬ್ಬಂದಿಯು 60 ವರ್ಷ ವಯೋಮಿತಿ ಮೀರಿದ ಪ್ರಕರಣಗಳಿದ್ದಲ್ಲಿ, ಅವರ ಬದಲಿಗೆ ಹೊಸ ಅಡುಗೆ ಸಿಬ್ಬಂದಿಯನ್ನು ಪಡೆಯಲು ಇಲಾಖೆಯಲ್ಲಿ ಜಾರಿಯಲ್ಲಿರುವ ಮಾರ್ಗಸೂಚಿಯಂತ ಅಗತ್ಯ ಕ್ರಮ ಕೈಗೊಳ್ಳುವುದು. ಶಾಲೆಯಲ್ಲಿ ಯೋಜನೆಯಡಿ ಮಧ್ಯಾಹ್ನ ಬಿಸಿಯೂಟ, ಕ್ಷೀರಭಾಗ್ಯ, ಪೂರಕ ಪೌಷ್ಠಿಕ ಆಹಾರ ವಿತರಣೆ ಕಾರ್ಯಕ್ರಮವನ್ನು ಯಾವುದೇ ಅಡೆ-ತಡೆ ಇಲ್ಲದೇ ಸುಸೂತ್ರವಾಗಿ ನಡೆಸಲು ಪೂರಕ ಕ್ರಮಗಳನ್ನು ಕೈಗೊಂಡು ಯೋಜನೆಯ ಯಶಸ್ಸಿಗೆ ಶ್ರಮವಹಿಸಲು ಸೂಚಿಸಿದೆ.

ತತ್ಸಂಬಂಧ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಕ್ಷಣಾಧಿಕಾರಿಗಳು (ಪಿಎಂಪೋಷಣ್) ಮತ್ತು ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಹಣಾಧಿಕಾರಿಗಳು, ಸಹಾಯಕ ನಿರ್ದೇಶಕರು (ಪಿಎಂಪೋಷಣ್) ರವರು ಸೂಕ್ತ ಮೇಲ್ವಿಚಾರಣೆಯನ್ನು ನಡೆಸುವುದು. ತತ್ಸಂಬಂಧಿತ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದೆ .

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...