ಬೆಂಗಳೂರು : ರಾಜ್ಯ ಸರ್ಕಾರವು ಭೂವಂಚನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಮಹತ್ವದ ಕ್ರಮ ಕೈಗೊಂಡಿದ್ದು, ಇನ್ಮುಂದೆ ಪಹಣಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಚಿಂತನೆ ನಡೆಸಿದೆ.
ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರದಿಂದ ಸಣ್ಣ ಮತ್ತು ಅತಿ ಸಣ್ಣ ರೈತರನ್ನು ಗುರುತಿಸಿ ಅವರಿಗೆ ಪರಿಹಾರ ಕ್ರಮಗಳನ್ನು ಒದಗಿಸುವುದಕ್ಕೆ ಶಾಶ್ವತ ವ್ಯವಸ್ಥೆ ರೂಪಿಸಲು ಚಿಂತನೆ ನಡೆಸಿದ್ದು, ರೈತರ ಪಹಣಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಲು ಮುಂದಾಗಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರದ ಅಂಕಿ- ಅಂಶಗಳ ಪ್ರಕಾರ ಕರ್ನಾಟಕದಲ್ಲಿರುವುದು ಶೇ. 44ರಷ್ಟು ಸಣ್ಣ ಮತ್ತು ಅತಿ ಸಣ್ಣ ರೈತರಿದ್ದಾರೆ ಆದರೆ, ರಾಜ್ಯದ 70 ಪ್ರತಿಶತದಷ್ಟು ಸಣ್ಣ ಮತ್ತು ಅತಿ ಸಣ್ಣ ರೈತರು ಇದ್ದಾರೆ. ಈ ಎಲ್ಲರನ್ನು ಗುರುತಿಸುವ ಕಾರ್ಯ ಹಾಗೂ ಒಂದು ವ್ಯವಸ್ಥೆಯಡಿ ತರುವ ಕಾರ್ಯವು ಇದುವರೆಗೆ ಆಗಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಈಗ ಕ್ರಮ ವಹಿಸಲು ಮುಂದಾಗಿದೆ ಎಂದು ತಿಳಿಸಿದ್ದಾರೆ.