alex Certify BIG NEWS : ಕೋವಿಡ್ ಲಸಿಕೆಯಿಂದ ‘ಹೃದಯಾಘಾತ ‘ಹೆಚ್ಚಳ.? : ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಲು ‘CM ಸಿದ್ದರಾಮಯ್ಯ’ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕೋವಿಡ್ ಲಸಿಕೆಯಿಂದ ‘ಹೃದಯಾಘಾತ ‘ಹೆಚ್ಚಳ.? : ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಲು ‘CM ಸಿದ್ದರಾಮಯ್ಯ’ ಆದೇಶ.!

ಬೆಂಗಳೂರು : ಕೋವಿಡ್ ಲಸಿಕೆಯಿಂದ ಹೃದಯಾಘಾತ ಹೆಚ್ಚಳವಾಗುತ್ತಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆ ಅಧ್ಯಯನಕ್ಕೆ ತಜ್ಞರ ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ.

ಕೊರೊನಾ ಕಾಲದ ನಂತರದಿಂದ ಎಳೆಯ ವಯಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ, ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರ ಈ ಸಮಸ್ಯೆಯ ಮೂಲ ಪತ್ತೆಮಾಡಿ, ಪರಿಹರಿಸಬೇಕು ಎನ್ನುವುದು ನನ್ನ ಯೋಚನೆಯೂ ಆಗಿತ್ತು. ಇಂತಹ ಸಂದರ್ಭದಲ್ಲಿ ಈ ಸಮಸ್ಯೆಯ ಬಗ್ಗೆ ಗಮನ ಸೆಳೆದು ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರು ಬರೆದ ಪತ್ರ ನನ್ನ ಯೋಚನೆಯನ್ನು ಕಾರ್ಯರೂಪಕ್ಕೆ ತರಲು ಪ್ರೇರಣೆಯಾಯಿತು. ಅವರಿಗೆ ಕೃತಜ್ಞತೆಗಳು. ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...