ಬೆಂಗಳೂರು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯಾದ್ಯಂತ ನರ್ಸ್ ಗಳು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದು, ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ದು ಸಂಘದ ನೇತೃತ್ವದಲ್ಲಿ ರಾಜ್ಯದ ಸಾವಿರಾರು ಶುಶ್ರೂಷಾಧಿಕಾರಿಗಳು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದು, ಇದರಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
ಸೇವೆ ಕಾಯಂ, ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸೋಮವಾರದಿಂದ ಪ್ರೀಡಂಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ. 15 ವರ್ಷದಿಂದ ಕೆಲಸ ಮಾಡುತ್ತಿದ್ದರೂ ನಮ್ಮ ಸಂಬಳ 14 ಸಾವಿರ ದಾಟಿಲ್ಲ ಎಂದು ನರ್ಸ್ ಗಳು ಆಕ್ರೋಶ ಹೊರ ಹಾಕಿದ್ದಾರೆ. ಈ ಹಿನ್ನೆಲೆ ಆರೋಗ್ಯ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.