ಕೋಲ್ಕತಾ : ಎರಡು ಗುಂಪುಗಳ ನಡುವಿನ ಘರ್ಷಣೆಯ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಬಿರ್ಭುಮ್ ಜಿಲ್ಲೆಯ ಸೈಂಥಿಯಾ ಪಟ್ಟಣದಲ್ಲಿ ಮಾರ್ಚ್ 17 ರವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ರಾಜ್ಯ ಗೃಹ ಮತ್ತು ಗುಡ್ಡಗಾಡು ವ್ಯವಹಾರಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಚೇರಿಯಿಂದ ಹೊರಡಿಸಿದ ಅಧಿಸೂಚನೆಯಲ್ಲಿ, ಸೈಂಥಿಯಾದಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ .ಕೆಲವು ಪ್ರದೇಶಗಳಲ್ಲಿ ಇತ್ತೀಚಿನ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು” ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ಇಂಟರ್ನೆಟ್ ಪ್ರಸರಣ ಮತ್ತು ವಾಯ್ಸ್ ಓವರ್ ಇಂಟರ್ನೆಟ್ ಟೆಲಿಫೋನಿ ಮೇಲೆ ಶುಕ್ರವಾರ ನಿಷೇಧ ಹೇರಲಾಗಿದೆ.