ತುಮಕೂರು: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿರುವ ಎನ್ ಐ ಎ ಕೆಲ ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ.
ತುಮಕೂರು ಜಿಲ್ಲೆಯಲ್ಲಿ ದಾಳಿ ನಡೆಸಿರುವ ಎನ್ ಐ ಎ ಅಧಿಕಾರಿಗಳು ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ.
ತುಮಕೂರಿನ ಮರಳೂರುದಿಣ್ಣೆ ಪ್ರದೇಶದ ಮನೆಯ ಮೇಲೆ ದಾಳಿ ನಡೆಸಿರುವ ದೆಹಲಿ ಹಾಗೂ ಬೆಂಗಳೂರು ಮೂಲದ ಎನ್ ಐ ಎ ಅಧಿಕಾರಿಗಳು ಶಂಕಿತ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದುಕೊಂಡಿರುವ ಯುವಕ ಮಹಾರಾಷ್ಟ್ರ ಮೂಲದವನಾಗಿದ್ದು, ಯುನಾನಿ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ವಿದ್ಯಾರ್ಥಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.