alex Certify BIG NEWS: ISIS ಉಗ್ರ ಸಂಘಟನೆಯೊಂದಿಗೆ ನಂಟು; ಕಾಲೇಜು ವಿದ್ಯಾರ್ಥಿಯನ್ನು ವಶಕ್ಕೆ ಪಡೆದ NIA | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ISIS ಉಗ್ರ ಸಂಘಟನೆಯೊಂದಿಗೆ ನಂಟು; ಕಾಲೇಜು ವಿದ್ಯಾರ್ಥಿಯನ್ನು ವಶಕ್ಕೆ ಪಡೆದ NIA

ತುಮಕೂರು: ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿರುವ ಎನ್ ಐ ಎ ಕೆಲ ಶಂಕಿತ ಉಗ್ರರನ್ನು ವಶಕ್ಕೆ ಪಡೆದಿದೆ.

ತುಮಕೂರು ಜಿಲ್ಲೆಯಲ್ಲಿ ದಾಳಿ ನಡೆಸಿರುವ ಎನ್ ಐ ಎ ಅಧಿಕಾರಿಗಳು ಐಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ.

ತುಮಕೂರಿನ ಮರಳೂರುದಿಣ್ಣೆ ಪ್ರದೇಶದ ಮನೆಯ ಮೇಲೆ ದಾಳಿ ನಡೆಸಿರುವ ದೆಹಲಿ ಹಾಗೂ ಬೆಂಗಳೂರು ಮೂಲದ ಎನ್ ಐ ಎ ಅಧಿಕಾರಿಗಳು ಶಂಕಿತ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದುಕೊಂಡಿರುವ ಯುವಕ ಮಹಾರಾಷ್ಟ್ರ ಮೂಲದವನಾಗಿದ್ದು, ಯುನಾನಿ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ವಿದ್ಯಾರ್ಥಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...