ಬೆಂಗಳೂರು : ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳ ಮೊದಲು ʻನಾಡಗೀತೆʼ ಹಾಡುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಹೈಕೋರ್ಟ್ ಗೆ ಮಾಹಿತಿ ನೀಡಿರುವ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎ.ಎಸ್. ಅಹ್ಮದ್, ಹಿಂದಿನ ಆದೇಶಕ್ಕೆ ಸರ್ಕಾರ ತಿದ್ದುಪಡಿ ತಂದು ೨೦೨೪ ರ ಫೆಬ್ರವರಿ ೧ ರಂದು ಆದೇಶ ಹೊರಡಿಸಲಾಗಿದೆ. ಅದರಂತೆ ಎಲ್ಲಾ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂತಿಕ ಚಟುವಟಿಕೆಗಳ ಮೊದಲು ಹಾಡಬೇಕು ಎಂದು ಹಿಂದಿನ ಆದೇಶದಲ್ಲಿ ಹೇಳಲಾಗಿತ್ತು ಎಂದು ತಿಳಿಸಿದ್ದಾರೆ.
ನಿರ್ದಿಷ್ಟ ಧಾಟಿಯಲಿ ನಾಡಗೀತೆ ಹಾಡುವುದಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ಆದೇಶವು ಖಾಸಗಿ ಶಾಲೆಗಳಿಗೂ ಅನ್ವಯವಾಗಲಿದೆಯೇ ಅಥವಾ ಇಲ್ಲವೇ? ಎಂಬ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ