ಬೆಂಗಳೂರು : ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರ ಫಲಕ ಪ್ರದರ್ಶನ ಕಡ್ಡಾಯ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ದರ ಫಲಕ ಪ್ರದರ್ಶನ ಕಡ್ಡಾಯವಾಗಿದೆ. ಆಸ್ಪತ್ರೆಗಳು ಯಾವ ಯಾವ ಚಿಕಿತ್ಸೆಗೆ ಎಷ್ಟು ದರ ಎಂಬುದನ್ನು ಫಲಕದಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು, ಈ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು, ಇದರಿಂದ ಚಿಕಿತ್ಸೆಗೆ ಬರುವ ಜನರಿಗೂ ಸೂಕ್ತ ಮಾಹಿತಿ ಸಿಗುತ್ತೆ, ಅವರಿಗೂ ಹಣ ಹೊಂದಿಸಿಕೊಳ್ಳಲು ಸಹಾಯವಾಗುತ್ತದೆ ಎಂದರು.
ಅದೇ ರೀತಿ ಸಾರ್ವಜನಿಕ ಆರೋಗ್ಯ ಸೇವೆಗೆ 270 ಹೊಸ ಅಂಬುಲೆನ್ಸ್ ಸೇರ್ಪಡೆಯಾಗಿವೆ. ತುರ್ತು ಚಿಕಿತ್ಸೆ ಸೇವೆ ಒದಗಿಸುವ ನಿಟ್ಟಿನಲ್ಲಿ 108 ಅಂಬುಲೆನ್ಸ್ ಸೇವೆ ಸುಧಾರಣೆಗೆ ತಾಂತ್ರಿಕ ಸಲಹಾ ಸಮಿತಿ ರಚಿಸಿದ್ದು, ಈ ಬಗ್ಗೆ ಕ್ರಮವಹಿಸಲಾಗುವುದು ಎಂದಿದ್ದಾರೆ.