alex Certify BIG NEWS : ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಮುದ್ರಿಸುವುದು ಕಡ್ಡಾಯ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಮುದ್ರಿಸುವುದು ಕಡ್ಡಾಯ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ.!

ಬೆಂಗಳೂರು : ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಮುದ್ರಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ..?

ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ, ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ನ್ನು ದಿನಾಂಕ: 12.03.2024 ರಿಂದ ಜಾರಿಗೆ ತಂದಿರುತ್ತದೆ. ಸದರಿ ಅಧಿನಿಯಮದ ಕಲಂ 17 (7)ರಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದೆಂದು ತಿಳಿಸಲಾಗಿದೆ.

ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲಾ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ಕಡ್ಡಾಯವಾಗಿ ಮುದ್ರಿಸುವಂತೆ ಈ ಮೂಲಕ ಸೂಚಿಸಲಾಗಿದೆ ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರ ಕಲಂ 9ರಡಿ ಗೊತ್ತುಪಡಿಸಿದ ಜಾರಿ ಪ್ರಾಧಿಕಾರಗಳು ಈ ಸೂಚನೆಗಳನ್ನು ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ ಎಲ್ಲಾ ಕೈಗಾರಿಕಾ ಮತ್ತು ಗ್ರಾಹಕ ವಸ್ತುಗಳ ಉತ್ಪನ್ನದಾರರು ಕಟ್ಟು ನಿಟ್ಟಾಗಿ ಅನುಷ್ಠಾನಗೊಳಿಸುವ ಬಗ್ಗೆ ಮೇಲ್ವಿಚಾರಣೆಯನ್ನು ಮಾಡುವಂತೆ ಸೂಚಿಸಲಾಗಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...