ಬೆಂಗಳೂರು : ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾಗೆ ಸೇರಿದ ಆಸ್ತಿಯನ್ನು ತಮಿಳುನಾಡಿಗೆ ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ.
ಜಯಲಲಿತಾಗೆ ಸೇರಿದ 7 ಕೆಜಿ ಚಿನ್ನ, 11344 ರೇಷ್ಮೆ ಸೀರೆ, 740 ದುಬಾರಿ ಚಪ್ಪಲಿ, 12 ಫ್ರಿಜ್, 10 ಟಿವಿ, 700 ಕೆಜಿ ಬೆಳ್ಳಿಯನ್ನು ತಮಿಳುನಾಡಿಗೆ ಹಸ್ತಾಂತರಿಸುವ ಪ್ರಕ್ರಿಯೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಆರಂಭವಾಗಿದೆ.
ಈ ಸಂಬಂಧ ಕಾನೂನು ಪ್ರಕ್ರಿಯೆ ನಡೆಯಬೇಕಿರುವ ಹಿನ್ನೆಲೆ ಕೋರ್ಟ್ ಹಸ್ತಾಂತರ ಪ್ರಕ್ರಿಯೆ ನಡೆಸುತ್ತಿದೆ. ನ್ಯಾಯಾಧೀಶರ ಸಮ್ಮುಖದಲ್ಲಿ ಜಯಲಲಿತಾಗೆ ಸೇರಿದ ವಸ್ತುಗಳನ್ನು ನೀಡಲಾಗುತ್ತಿದೆ.
ತಮಿಳುನಾಡಿನ ಪೊಲೀಸರು ಬಿಗಿ ಭದ್ರತೆಯಲ್ಲಿ ಈ ಎಲ್ಲ ವಸ್ತುಗಳನ್ನು ಕೊಂಡೊಯ್ಯಲಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಂದ ಮುಟ್ಟುಗೋಲು ಹಾಕಿಕೊಂಡಿದ್ದ ಬೆಲೆ ಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ಹರಾಜು ಹಾಕುವ ಬದಲು ತಮಿಳುನಾಡು ಸರಕಾರದ ಸುಪರ್ದಿಗೆ ನೀಡುವಂತೆ ವಿಶೇಷ ನ್ಯಾಯಾಲಯವು ಆದೇಶಿಸಿತ್ತು.