ವಿಜಯಪುರ: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರದಿದ್ದರೆ ಪಕ್ಷವನ್ನೇ ವಿಸರ್ಜನೆ ಮಾಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆ ಸಿಂದಗಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಒಂದೊಮ್ಮೆ ಪಕ್ಷ ಅಧಿಕಾರಕ್ಕೆ ಬಾರದಿದ್ದಲ್ಲಿ ಜೆಡಿಎಸ್ ವಿಸರ್ಜನೆ ಮಾಡುತ್ತೇವೆ ಎಂದು ಹೇಳಿದರು.
ಬಿಜೆಪಿಯವರು ಜನರ ತೆರಿಗೆ ಹಣ ಲೂಟಿ ಮಾಡುತ್ತಿದ್ದಾರೆ. ಕಾಂಗ್ರೆಸ್, ಬಿಜೆಪಿ ರೈತರಿಗೆ ಯಾವುದೇ ಯೋಜನೆ ಜಾರಿಗೊಳಿಸಿಲ್ಲ. 2028ರ ಬಳಿಕ ನಿಮ್ಮ ಬಳಿ ಮತ ಕೇಳಲು ಬರಲ್ಲ. ನಮ್ಮ ತಪ್ಪಿನಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದೇವೆ. ದೇವೇಗೌಡರ ಮೇಲೆ ನೀವು ಇಟ್ಟಿರುವ ಪ್ರೀತಿಯನ್ನು ಮರೆತಿಲ್ಲ, ಪಂಚರತ್ನ ಯೋಜನೆಗೆ ಯಾವುದೇ ಜಾತಿ, ಧರ್ಮ ಇಲ್ಲ. ಪಂಚರತ್ನ ಯೋಜನೆಯ 5 ಕಾರ್ಯಕ್ರಮಗಳು ಜಾರಿಯಾದರೆ ರಾಜ್ಯ ರಾಮರಾಜ್ಯವಾಗುತ್ತದೆ ಎಂದು ಹೇಳಿದರು.