alex Certify BIG NEWS: JDS ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಜ್ಯೋತಿಷಿ ಹೆಚ್.ಡಿ.ರೇವಣ್ಣ ತಕರಾರು ಎಂದ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: JDS ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಜ್ಯೋತಿಷಿ ಹೆಚ್.ಡಿ.ರೇವಣ್ಣ ತಕರಾರು ಎಂದ ಕುಮಾರಸ್ವಾಮಿ

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಇಂದಿನಿಂದ ಪಂಚರತ್ನ ರಥಯಾತ್ರೆ ಪುನರಾರಂಭವಾಗಲಿದೆ. ಇಂದು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡಿಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ ಕೊನೇ ಕ್ಷಣದಲ್ಲಿ ಬದಲಾವಣೆಗಳಾಗಿವೆ.

ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ನಿಂದ ಮೊದಲ ಹಂತದಲ್ಲಿ 100 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಆದರೆ ಇಂದು ಪಟ್ಟಿ ಬಿಡುಗಡೆಗೆ ತಕರಾರು ಬಂದಿರುವುದರಿಂದ ಸೂಕ್ತ ಸಮಯ ನೋಡಿಕೊಂಡು ಬಿಡುಗಡೆ ಮಾಡುತ್ತೇವೆ ಎಂದರು.

ಹೆಚ್.ಡಿ.ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿಗಳಾಗಿದ್ದಾರೆ. ಇಂದು ಸಮಯ ಪ್ರಸಕ್ತವಾಗಿಲ್ಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸೂಕ್ತವಲ್ಲ ಎಂದು ತಕರಾರು ತೆಗೆದಿದ್ದಾರೆ. ಹಾಗಾಗಿ ಸಮಯ ನೋಡಿಕೊಂಡು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...