alex Certify BIG NEWS: JDS ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಯಾವ ದೊಣ್ಣೆ ನಾಯಕ….?; ವಿಪಕ್ಷ ನಾಯಕನ ವಿರುದ್ಧ ಮತ್ತೆ ಗುಡುಗಿದ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: JDS ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಯಾವ ದೊಣ್ಣೆ ನಾಯಕ….?; ವಿಪಕ್ಷ ನಾಯಕನ ವಿರುದ್ಧ ಮತ್ತೆ ಗುಡುಗಿದ HDK

ಬೆಂಗಳೂರು: ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಜೆಡಿಎಸ್ ಟಿಕೆಟ್ ನೀಡಿದ ವಿಚಾರವಾಗಿ ಸಿದ್ದರಾಮಯ್ಯ ಹೇಳಿಕೆಗೆ ಮತ್ತೆ ತಿರುಗೇಟು ನೀಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಮ್ಮ ಪಕ್ಷದ ಅಭ್ಯರ್ಥಿ ವಿಚಾರವಾಗಿ ಮಾತನಾಡಲು ಸಿದ್ದರಾಮಯ್ಯ ಯಾವ ದೊಣ್ಣೆ ನಾಯಕ? ಎಂದು ಕಿಡಿಕಾರಿದ್ದಾರೆ.

ಯಾವ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯನ್ನು ನಿಲ್ಲಿಸಬೇಕು ಎಂಬುದು ನಮ್ಮ ಪಕ್ಷದ ವಿಚಾರ. ಅದರ ಬಗ್ಗೆ ಸಿದ್ದರಾಮಯ್ಯನವರನ್ನು ಕೇಳಿ ನಾವು ನಿರ್ಧರಿಸಬೇಕಿಲ್ಲ. ನಮ್ಮ ಪಕ್ಷದ ಬಗ್ಗೆ, ನಮ್ಮ ಅಭ್ಯರ್ಥಿಗಳ ಬಗ್ಗೆ ಮಾತನಾಡಲು ಅವರು ಯಾರು? ಎಂದು ಪ್ರಶ್ನಿಸಿದರು.

ʼಕ್ರೆಡಿಟ್ʼ ಕಾರ್ಡ್ ಅವಧಿ ಮುಗಿದ್ರೆ ಏನಾಗುತ್ತೆ…? ನಿಮಗೆ ತಿಳಿದಿರಲಿ ಈ ಉಪಯುಕ್ತ ಮಾಹಿತಿ

ಚುನಾವಣೆಯಲ್ಲಿ ಗೆಲ್ಲುವ ನಿಟ್ಟಿನಲ್ಲಿ ಯಾವ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂಬುದನ್ನು ಜೆಡಿಎಸ್ ಮುಖಂಡರ ಜೊತೆ ಚರ್ಚಿಸಿ ಲೆಕ್ಕಚಾರದ ಮೇಲೆ ಅಭ್ಯರ್ಥಿ ಕಣಕ್ಕಿಳಿಸಿದ್ದೇವೆ. ನಮ್ಮ ಪಕ್ಷದ ಯಾರನ್ನು ಅಭ್ಯರ್ಥಿ ಮಾಡಬೇಕು ಎಂದು ಸಿದ್ದರಾಮಯ್ಯನವರ ಅಭಿಪ್ರಾಯ, ಅವರ ಪರ್ಮಿಷನ್ ಕೇಳುವ ಅಗತ್ಯವಿಲ್ಲ. ನಮ್ಮ ಪಕ್ಷದಲ್ಲಿ ಯಾರನ್ನು ಕಣಕ್ಕಿಳಿಸಬೇಕು ಎಂದು ಹೇಳಲು ಸಿದ್ದರಾಮಯ್ಯ ಜೆಡಿಎಸ್ ಮುಖಂಡರಾ? ನಮ್ಮ ಅಭ್ಯರ್ಥಿಗಳ ಬಗ್ಗೆ ಸಿದ್ದರಾಮಯ್ಯನವರ ಹೇಳಿಕೆಗಳೇ ಅಪ್ರಸ್ತುತ ಎಂದು ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...