ಬೆಂಗಳೂರು: ಜೆಡಿಎಸ್ ಮಾಜಿ ಶಾಸಕ ಗುಬ್ಬಿ ಶ್ರೀನಿವಾಸ್ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಗುಬ್ಬಿ ಶ್ರೀನಿವಾಸ್ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ಅವರು, ಮಾನಸಿಕವಾಗಿ ನನಗೆ ಬಿಜೆಪಿ ಒಗ್ಗಲ್ಲ, ಬಿಜೆಪಿಯವರು ಕೋಮುಗಲಭೆ ಸೃಷ್ಟಿಸಿ ಅಧಿಕಾರ ಪಡೆಯುತ್ತಾರೆ. ನನ್ನ ಮನಸ್ಸಿಗೆ ಬಿಜೆಪಿ ಒಗ್ಗಲ್ಲ, ಹಾಗಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದೇನೆ ಎಂದರು.
ನಾನು ಮೂಲತಃ ಕಾಂಗ್ರೆಸ್ ಸದಸ್ಯನೇ. ಈಗ ಮತ್ತೆ ಕಾಂಗ್ರೆಸ್ ಗೆ ಬಂದಿರುವುದು ನನಗೆ ಸ್ವಂತ ಮನೆಗೆ ಬಂದಷ್ಟು ಖುಷಿಯಾಗಿದೆ ಎಂದು ಹೇಳಿದರು.