alex Certify BIG NEWS : ಲೋಕಸಭೆ ಚುನಾವಣೆಯಲ್ಲಿ ‘ಬಿಜೆಪಿ’ ಜೊತೆ ‘ಜೆಡಿಎಸ್’ ಮೈತ್ರಿ : H.D ದೇವೇಗೌಡ ಮಹತ್ವದ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಲೋಕಸಭೆ ಚುನಾವಣೆಯಲ್ಲಿ ‘ಬಿಜೆಪಿ’ ಜೊತೆ ‘ಜೆಡಿಎಸ್’ ಮೈತ್ರಿ : H.D ದೇವೇಗೌಡ ಮಹತ್ವದ ಹೇಳಿಕೆ

ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ವದಂತಿಗಳಿಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ದೇವೇಗೌಡರು ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ಕೂಡ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ ನೀಡಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳದೇ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದರು. ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕರಾಗ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಸದ್ಯ ಈ ಎಲ್ಲ ಚರ್ಚೆಗಳಿಗೂ ಬ್ರೇಕ್ ಬಿದ್ದಿದೆ.

ಬಿಜೆಪಿಗೆ ಇನ್ನು ಶಾಸಕಾಂಗ ಪಕ್ಷದ ನಾಯಕ ಸಿಕ್ಕಿಲ್ಲ. ಪ್ರತಿಪಕ್ಷ ನಾಯಕನ ಸ್ಥಾನ ಅಲಂಕರಿಸುವ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮತ್ತಷ್ಟು ಕಗ್ಗಂಟಾಗಿದೆ. ಬಜೆಟ್ , ವಿಧಾನಮಂಡಲ ಅಧಿವೇಶನ ನಡೆದರೂ ಇನ್ನೂ ಕೂಡ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ಅಂತಿಮವಾಗಿಲ್ಲ. ಈ ನಡುವೆ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ ಸ್ಪೋಟಕ ಹೇಳಿದ್ದಾರೆ. ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ, ಬಸವಗೌಡ ಪಾಟೀಲ್ ಯತ್ನಾಳ್ ವಿಪಕ್ಷ ನಾಯಕರಾಗುವುದು ಬಹುತೇಕ ಖಚಿತ ಎಂದಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...