ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿರ್ಧಾರ ಪ್ರಕಟವಾದ ನಂತರ ಇದೇ ಮೊದಲ ಬಾರಿಗೆ ದಳಪತಿಗಳು ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದಾರೆ.
ದೆಹಲಿಯ ಸಂಸತ್ ಭವನದಲ್ಲಿ ಇಂದು ಮಾಜಿ ಪ್ರಧಾನಿ H D ದೇವೇಗೌಡ ಪುತ್ರರಾದ H.D ಕುಮಾರಸ್ವಾಮಿ ಮತ್ತು H.D ರೇವಣ್ಣ ಅವರ ಜೊತೆ ಪ್ರಧಾನಿ ಮೋದಿ ಅವರನ್ನು ಭೇಟಿಯಾದರು.
ಈ ವಿಚಾರವನ್ನು ಪ್ರಧಾನಿ ಮೋದಿ ಎಕ್ಸ್ ( ಟ್ವಿಟರ್ ) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ರಾಷ್ಟ್ರದ ಪ್ರಗತಿಗೆ ದೇವೇಗೌಡ ಜಿ ಅವರ ಅನುಕರಣೀಯ ಕೊಡುಗೆಯನ್ನು ಭಾರತವು ಬಹಳವಾಗಿ ಗೌರವಿಸುತ್ತದೆ ಎಂದು ಪೋಸ್ಟ್ ಮಾಡಿದ್ದಾರೆ.