ಬೆಂಗಳೂರು : ಕನ್ನಡಿಗರ ಮೇಲೆ ಹಲ್ಲೆ, ದೌರ್ಜನ್ಯ, ಮರಾಠಿ ಪುಂಡರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ಮೇಕೆದಾಟು ಸೇರಿದಂತೆ ಹಲವು ನೀರಾವರಿ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆ ಹೋರಾಟಗಾರ ವಾಟಾಳ್ ನಾಗರಾಜ್ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.
ಕರ್ನಾಟಕ ಬಂದ್ ಹಿನ್ನೆಲೆ ಶಾಂತಿ ಕಾಪಾಡುವಂತೆ ರಾಜ್ಯದ ಜನತೆಗೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ಜನರು ಶಾಂತಿ ಕಾಪಾಡಬೇಕು ಮತ್ತು ಕಾನೂನಿಗೆ ಬದ್ಧರಾಗಿರಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. “ನಾವು ರಾಜ್ಯದ ಹಿತಾಸಕ್ತಿಯನ್ನು ರಕ್ಷಿಸುತ್ತೇವೆ. ಪ್ರತಿಯೊಬ್ಬರೂ ಶಾಂತಿ ಕಾಪಾಡಬೇಕು ಮತ್ತು ಕಾನೂನನ್ನು ಪಾಲಿಸಬೇಕು. ಬಂದ್ ಅಗತ್ಯವಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದರು.