ತುಮಕೂರು : ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಬಳಿಯ ಕುಣಿಗಲ್ –ಮದ್ದೂರು ಬೈಪಾಸ್ ನಲ್ಲಿ ಶನಿವಾರ ರಾತ್ರಿ ನಡೆದಿದೆ.
ಸುರೇಶ್ ಅಲಿಯಾಸ್ ಕ್ಯಾಪ್ಟನ್ ಸೂರಿ (40) ಎಂಬಾತನನ್ನು ಕೊಲೆ ಮಾಡಲಾಗಿದೆ. ಈತ ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದನು . ಅಲ್ಲದೇ 3 ತಿಂಗಳ ಹಿಂದೆಯಷ್ಟೇ ಜೈಲಿಂದ ಬಿಡುಗಡೆಯಾಗಿ ಬಂದಿದ್ದನು.
ಬೈಪಾಸ್ ನಲ್ಲಿ ಸೂರಿ ಕಾರಿನಲ್ಲಿ ಬರುತ್ತಿದ್ದ ವೇಳೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.